ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಸಿನಿಮಾ ಆಗಸ್ಟ್ 9 ರ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ.
ಆಗಸ್ಟ್ನಿಂದ ಮುಂದಕ್ಕೆ ಹೋಯ್ತು 'ಪೈಲ್ವಾನ್' ಬಿಡುಗಡೆ ದಿನಾಂಕ - undefined
ಆಗಸ್ಟ್ 9 ರಂದು ಬಿಡುಗಡೆಯಾಗಬೇಕಿದ್ದ 'ಪೈಲ್ವಾನ್' ಸಿನಿಮಾ ಸೆಪ್ಟೆಂಬರ್ 12 ರಂದು ಒಟ್ಟು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೃಷ್ಣ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು ಅವರ ಪತ್ನಿ ಸ್ವಪ್ನಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ.
ಕೆಲವೊಂದು ತಾಂತ್ರಿಕ ಕಾರಣಗಳಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12ಕ್ಕೆ ಸಿನಿಮಾ ಏಕಕಾಲಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿರುವುದು ಕಿಚ್ಚನ ಅಭಿಮಾನಿಗಳಿಗೆ ಸ್ವಲ್ಪ ನಿರಾಶೆಯಾದರೂ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕ ಕೇಳಿ ಖುಷಿ ಪಟ್ಟಿದ್ದಾರೆ. ಮೊದಲ ಬಾರಿಗೆ 'ಪೈಲ್ವಾನ್' ಪಾತ್ರದಲ್ಲಿ ಕಿಚ್ಚ ನಟಿಸಿದ್ದಾರೆ. ಮೊದಲು ಈ ಪಾತ್ರ ಮಾಡಲು ನಿರಾಕರಿಸಿದ್ದ ಸುದೀಪ್ ನಂತರ ಮನಸ್ಸು ಬದಲಾಯಿಸಿದ್ದಾರೆ. ಸಾಕಷ್ಟು ವರ್ಕೌಟ್ ಮಾಡಿ ದೇಹವನ್ನು ಹುರಿಗೊಳಿಸಿದ್ದಾರೆ. ಕೃಷ್ಣ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರತಂಡ ಸಿನಿಮಾದ ಹೊಸ ಪೋಸ್ಟರನ್ನು 5 ಭಾಷೆಗಳಲ್ಲಿ ಕೂಡಾ ಬಿಡುಗಡೆಗೊಳಿಸಿದೆ. ಸ್ವಪ್ನಕೃಷ್ಣ ಚಿತ್ರವನ್ನು ನಿರ್ಮಿಸಿದ್ದಾರೆ. ಕಿಚ್ಚನೊಂದಿಗೆ ಆಕಾಂಕ್ಷ ಸಿಂಗ್ ಜೊತೆಯಾಗಿದ್ದು ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.