ನವದೆಹಲಿ :ಪೋರ್ನ್ ವಿಡಿಯೋ ದಂಧೆ ಪ್ರಕರಣದಲ್ಲಿ ಬಾಲಿವುಡ್ ನಟಿ ಮತ್ತು ರೂಪದರ್ಶಿ ಶೆರ್ಲಿನ್ ಚೋಪ್ರಾಗೆ ಬಂಧನದಿಂದ ಸುಪ್ರೀಂಕೋರ್ಟ್ ರಕ್ಷಣೆ ನೀಡಿದೆ. ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಾಂಬೆ ಹೈಕೋರ್ಟ್ ನಟಿಗೆ ನಿರೀಕ್ಷಣಾ ಜಾಮೀನು ತಿರಸ್ಕಾರ ಮಾಡಿದ್ದರಿಂದ ಈ ಆದೇಶ ಪ್ರಶ್ನೆ ಮಾಡಿ ಚೋಪ್ರಾ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಜೊತೆಗೆ ಅರ್ಜಿದಾರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.