ಹೈದರಾಬಾದ್: ತೆಲಗು ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಆಕ್ಷನ್ ಚಿತ್ರ ‘ಸಲಾರ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ದೇಶಕರ ಮತ್ತೊಂದು ಬಿಗ್ ಮೂವಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ.
"ಪ್ಯಾನ್ ಇಂಡಿಯಾ" ಚಿತ್ರ ಸಲಾರ್ ಅನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ವಿಜಯ್ ಕಿರಗಂದೂರು ಅವರ ಹೊಂಬಾಳೆ ಪ್ರೊಡಕ್ಷನ್ಸ್ನಲ್ಲಿ ಮೂಡಿಬರುತ್ತಿರುವ ಸಲಾರ್ ಚಿತ್ರದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿದ್ದಾರೆ. ಬಹು ನಿರೀಕ್ಷಿತ ಸಲಾರ್ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ.