ಸ್ಯಾಂಡಲ್ವುಡ್ನಲ್ಲಿ ಹಲವು ಹೊಸ ಸಿನಿಮಾಗಳು ಚಿತ್ರೀಕರಣ ಮುಗಿಸಿ ರಿಲೀಸ್ಗೆ ರೆಡಿಯಾಗಿವೆ. ಇದೀಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಅರ್ಜುನ್ ಗೌಡ ಸಿನಿಮಾ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ನಲ್ಲಿ ಬ್ಯುಸಿಯಾಗಿದೆ.
ಈಗಾಗಲೇ ಅರ್ಜುನ್ ಗೌಡ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಬೇರೆ ಭಾಷೆಯ ವಿತರಕರು ಹಾಗೂ ನಿರ್ಮಾಪಕರು ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಪ್ರಜ್ವಲ್ ದೇವರಾಜ್ ಸೇರಿದಂತೆ ಇಡೀ ಚಿತ್ರತಂಡ ಡಬ್ಬಿಂಗ್ ಮುಗಿಸಿದೆ. ಪ್ರಜ್ವಲ್ ದೇವರಾಜ್ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ನ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.
ನಿರ್ದೇಶಕ ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಹಸ ನಿರ್ದೇಶಕ ಮಾಸ್ ಮಾದ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳನ್ನ ಕಂಪೋಸ್ ಮಾಡಿದ್ದಾರೆ. ಅದ್ಧೂರಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾದ ನಿರ್ಮಾಪಕ ರಾಮು, ಅರ್ಜುನ್ ಗೌಡ ಚಿತ್ರವನ್ನ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಲಾಕ್ಡೌನ್ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್ನಲ್ಲಿ ಬಿಡುಗಡೆಯಾಗಬೇಕಿತ್ತು. ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಸಿನಿಮಾವನ್ನು ನಿಗದಿತ ಸಮಯ ನೋಡಿಕೊಂಡು ಬಿಡುಗಡೆ ಮಾಡುವ ಆಶಯ ನಿರ್ಮಾಪಕರದ್ದಾಗಿದೆ.