ವಾಷಿಂಗ್ಟನ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಪತಿ ನಿಕ್ ಜೋನ್ಸ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಶೇರ್ ಮಾಡುವ ಮೂಲಕ ಶುಭ ಕೋರಿದ್ದಾರೆ.
ನಿಕ್ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆ ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಹಂಚಿಕೊಂಡಿರುವ ನಟಿ, he is the "kindest" person. "Love of my life '' ಎಂದು ಬರೆದುಕೊಂಡಿದ್ದಾರೆ.
ಶೇರ್ ಮಾಡಿರುವ ಈ ಫೋಟೋದಲ್ಲಿ ಪ್ರಿಯಾಂಕಾ ಹಳದಿ ಬಣ್ಣದ ಉಡುಪು ಹಾಕಿಕೊಂಡಿದ್ದು, ನಿಕ್ ಜೋನ್ಸ್ ಕಪ್ಪು ಬಣ್ಣದ ಟಿ ಶರ್ಟ್ ಧರಿಸಿದ್ದಾರೆ. ಅಭಿಮಾನಿಗಳು ಕಾಮೆಂಟ್ ಮೂಲಕ ಪೋಸ್ಟ್ಗೆ ಪ್ರತಿಕ್ರಿಯೆ ನೀಡುತ್ತಿದ್ದು, ಅತ್ಯುತ್ತಮ ಜೋಡಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ನಿಕ್ ಜೋನ್ಸ್ ಸಹ ಹುಟ್ಟುಹಬ್ಬಕ್ಕೆ ಶುಭ ಕೋರಿರುವುದಕ್ಕೆ ಪ್ರತಿಕ್ರಿಯೆ ನೀಡಿದ್ದು, "She surprised me for my birthday. She's the best. #29 thanks for all the love everyone'' ಎಂದು ಪೋಸ್ಟ್ ಮಾಡಿದ್ದಾರೆ.