ಮುಂಬೈ:ಬಾಲಿವುಡ್ ಬೆಡಗಿ, ವಿಶ್ವಸುಂದರಿ ಪ್ರಿಯಾಂಕಾ ಚೋಪ್ರಾ (Priyanka Chopra) ತಮ್ಮ ಇನ್ಸ್ಟಾಗ್ರಾಂ (Instagram) ಖಾತೆಯಲ್ಲಿ ತಮ್ಮ ಹೆಸರಿನೊಂದಿಗಿದ್ದ ಪತಿಯ ಹೆಸರು ತೆಗೆದುಹಾಕಿದ್ದಾರೆ. ಇದರ ಬೆನ್ನಲ್ಲೇ ಇವರ ದಾಂಪತ್ಯದಲ್ಲೂ ಬಿರುಕು ಉಂಟಾಗಿದೆ ಎಂಬ ಗುಸುಗುಸು ಶುರುವಾಗಿದೆ.
2018ರ ಡಿಸೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿ, ಕಳೆದ ಕೆಲ ದಿನಗಳ ಹಿಂದೆ ಒಟ್ಟಿಗೆ ದೀಪಾವಳಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದರ ಜೊತೆಗೆ ಪಾಪ್ ಸ್ಟಾರ್ ನಿಕ್ ಹಾಗೂ ಹಾಲಿವುಡ್ನ ಖ್ಯಾತ ನಟಿ ಪ್ರಿಯಾಂಕಾ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಪ್ರಿಯಾಂಕಾ (Priyanka and Nick) ನಿರ್ಧಾರ ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.