2018ರ ಡಿಸೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಹಾಲಿವುಡ್ ಹಾಟ್ ಜೋಡಿ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಕಳೆದ ಕೆಲ ದಿನಗಳ ಹಿಂದೆ ಒಟ್ಟಿಗೆ ದೀಪಾವಳಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದೀಗ 'ಥ್ಯಾಂಕ್ಸ್ ಗಿವಿಂಗ್' ಆಚರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಂತಸದ ಕ್ಷಣವನ್ನು ಶೇರ್ ಮಾಡಿದ್ದಾರೆ.
ಹಾಲಿವುಡ್ ಹಾಟ್ ಜೋಡಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ನಡುವಿನ ಅನುಬಂಧ ದಿನೇ ದಿನೆ ಇನ್ನಷ್ಟು ಹತ್ತಿರವಾಗುತ್ತಿದೆ. ಪಾಪ್ ಸ್ಟಾರ್ ನಿಕ್ ಹಾಗೂ ಪ್ರಿಯಾಂಕಾ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ ಪ್ರಿಯಾಂಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ 70.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ನಿಕ್ ಜೋನಾಸ್ ಸದ್ಯಕ್ಕೆ 31.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.