ಇದೀಗ ದೇಶಾದ್ಯಂತ ಕೊರೊನಾ ವ್ಯಾಕ್ಸಿನ್ ವಿತರಣೆ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಹಾಗೂ ಯುನಿಸೆಫ್ ಗುಡ್‌ವಿಲ್ ರಾಯಭಾರಿಯಾಗಿರುವ ಪ್ರಿಯಾಂಕಾ ಚೋಪ್ರಾ ಭಾರತದ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೊನಾ ವ್ಯಾಕ್ಸಿನ್ ಡ್ರೈವ್ ಶ್ಲಾಘಿಸಿದ ಪ್ರಿಯಾಂಕ ಚೋಪ್ರಾ - ಪ್ರಿಯಾಂಕ ಚೋಪ್ರಾ ಸುದ್ದಿ
ಬಾಲಿವುಡ್ ನಟಿ ಹಾಗೂ ಯುನಿಸೆಫ್ ಗುಡ್‌ವಿಲ್ ರಾಯಭಾರಿಯಾಗಿರುವ ಪ್ರಿಯಾಂಕಾ ಚೋಪ್ರಾ ಭಾರತದ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಶ್ಲಾಘಿಸಿದ್ದಾರೆ.
ಕೊರೊನಾ ವ್ಯಾಕ್ಸಿನ್ ಡ್ರೈವ್ ಶ್ಲಾಘಿಸಿದ ಪ್ರಿಯಾಂಕ ಚೋಪ್ರಾ
ತಮ್ಮ ಟ್ವಿಟ್ಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ, ಬೃಹತ್ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಿರುವ ಭಾರತೀಯ ಅಧಿಕಾರಿಗಳು, ವೈದ್ಯಕೀಯ ಮತ್ತು ಆರೋಗ್ಯ ತಂಡಗಳಿಗೆ ಅಭಿನಂದನೆಗಳು. ಜನರನ್ನು ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ನಮ್ಮ ಕೊರೊನಾ ವಾರಿಯರ್ಸ್ಗೆ ಎಂದೆಂದಿಗೂ ಕೃತಜ್ಞರಾಗಿರಬೇಕು ” ಎಂದು ಪ್ರಿಯಾಂಕಾ ಬರೆದಿದ್ದಾರೆ.
ಕೋವ್ಯಾಕ್ಸಿನ್ ಬಗ್ಗೆ ಮಾತನಾಡಿರುವ ಕೆಂದ್ರ ಗೃಹ ಸಚಿವ ಅಮಿತ್ ಶಾ, ಭಾರತದಲ್ಲಿ ತಯಾರಾಗಿರುವ ಕೊರೊನಾ ವ್ಯಾಕ್ಸಿನ್ ಆತ್ಮ ನಿರ್ಭರ ಭಾರತಕ್ಕೆ ಹಿಡಿದ ಕೈಗನ್ನಡಿ ಎಂದಿದ್ದಾರೆ.