ಮಂಗಳೂರು: ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಕುರಿತು ಸಿನಿಮಾ ಮಾಡಲು ಮಂಗಳೂರಿನ ನಿರ್ಮಾಪಕರೊಬ್ಬರು ಮುಂದಾಗಿದ್ದಾರೆ. ಚಂದ್ರಶೇಖರ ಸ್ವಾಮೀಜಿ ಆಶೀರ್ವಾದದೊಂದಿಗೆ ಮಂಗಳೂರು ಎ.ಆರ್. ಪ್ರೊಡಕ್ಸನ್ ಬ್ಯಾನರ್ನಡಿ ಈ ಸಿನಿಮಾ ನಿರ್ಮಾಣವಾಗಲಿದೆ ಎಂದು ನಿರ್ಮಾಪಕ ಅರುಣ್ ರೈ ತೋಡಾರ್ ತಿಳಿಸಿದ್ದಾರೆ.
ಈ ಕುರಿತು 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಹಿಂದಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿ ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಗೆ ಡಬ್ ಮಾಡಲು ಚಿಂತಿಸಲಾಗಿದೆ. ನೀರಜ್ ಚೋಪ್ರಾ ಸಾಧನೆಯನ್ನು ಸಿನಿಮಾ ಮೂಲಕ ತೋರಿಸಿ ದೇಶದ ಯುವ ಜನತೆಯನ್ನು ಹುರಿದುಂಬಿಸುವ ಕಾರ್ಯ ಮಾಡಲಾಗುವುದು ಎಂದು ನಿರ್ಮಾಪಕರು ಹೇಳಿದ್ದಾರೆ.
'ಈಟಿವಿ ಭಾರತ' ಜೊತೆ ಚಿತ್ರ ನಿರ್ಮಾಣದ ಕುರಿತು ನಿರ್ಮಾಪಕ ಅರುಣ್ ರೈ ತೋಡಾರ್ ಮಾತು ನಿರ್ಮಾಪಕ ಅರುಣ್ ರೈ ತೋಡಾರ್ ಜೀಟಿಗೆ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಇದೀಗ ಎಸ್.ವಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಐದು ಭಾಷೆಯಲ್ಲಿ 'ಬಿರ್ದ್ದ ಕಂಬಳ' ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಮುಕ್ತಾಯದ ಬಳಿಕ ನೀರಜ್ ಕುರಿತಾದ ಮೂವಿ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ನೀರಜ್ ಚೋಪ್ರಾ ಇತ್ತೀಚೆಗೆ ನಡೆದ ಟೋಕಿಯೊ ಒಲಿಪಿಂಕ್ಸ್-2020 ದ ಜಾವಲಿನ್ ಎಸೆತ ವಿಭಾಗದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡು, ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರ ಜೀವನ, ಸಾಧನೆ ಕುರಿತು ಕರಾವಳಿಯ ನಿರ್ಮಾಪಕರು ಚಿತ್ರ ನಿರ್ಮಿಸಲು ಮತ್ತು ದೇಶದ ಯುವ ಜನತೆಗೆ ಸ್ಫೂರ್ತಿ ತುಂಬಲು ಮುಂದಾಗಿರುವುದು ಉತ್ತಮ ಬೆಳವಣಿಗೆ