'ಪ್ರೇಮದ ಕಾಣಿಕೆ' ಸಿನಿಮಾ ತೆರೆಕಂಡ ನಂತರ ಪುನೀತ್ 'ಸನಾದಿ ಅಪ್ಪಣ್ಣ' ಚಿತ್ರದಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದರು. ನಂತರದಲ್ಲಿ ತಾಯಿಗೆ ತಕ್ಕ ಮಗ, ವಸಂತ ಗೀತಾ, ಭೂಮಿಗೆ ಬಂದ ಭಗವಂತ, ಭಾಗ್ಯವಂತ, ಹೊಸ ಬೆಳಕು ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಪುನೀತ್ ಅದ್ಭುತವಾಗಿ ನಟಿಸಿದ್ದರು. ಈ ಸಮಯದಲ್ಲಿ ಪುನೀತ್ ಮಾಸ್ಟರ್ ಲೋಹಿತ್ ಆಗಿ ಪರಿಚಯಗೊಂಡಿದ್ದರು.
6 ತಿಂಗಳ ಶಿಶುವಾಗಿದ್ದಾಗಲೇ ಬೆಳ್ಳಿ ತೆರೆಗೆ ಕಾಲಿಟ್ಟಿದ್ದ ಪುನೀತ್! - ಪುನೀತ್ ನಟನೆಯ ಸುದ್ದಿ
ಅದು 1976ನೇ ಇಸವಿ. ಡಾ.ರಾಜ್ಕುಮಾರ್, ಆರತಿ ಹಾಗೂ ಜಯಮಾಲ ಅಭಿನಯದ 'ಪ್ರೇಮದ ಕಾಣಿಕೆ' ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ 6 ತಿಂಗಳ ಶಿಶುವಾಗಿ ಕಾಣಿಸಿದ್ದರು. ಈ ಮೂಲಕ ಬೆಳ್ಳಿ ಪರದೆ ಮೇಲೆ ಮಿಂಚುವ ಸುಳಿವನ್ನು ಅಂದೇ ನೀಡಿದ್ದರು. ಇದಾದ ನಂತರ ಬಾಲ ಕಲಾವಿದನಾಗಿ, ಹೀರೋ ಆಗಿ ಪುನೀತ್ ಕರ್ನಾಟಕದ ಮನೆ ಮನಗಳಲ್ಲಿ ಹೆಸರುವಾಸಿಯಾಗಿದ್ದಾರೆ. ಇದೀಗ ಅವರ ಸಿನಿ ಪ್ರಯಾಣಕ್ಕೆ ಸುಮಾರು 45 ವರ್ಷಗಳೇ ಕಳೆದಿವೆ..
6 ತಿಂಗಳ ಶಿಶುವಾಗಿದ್ದಾಗಲೇ ಬೆಳ್ಳಿ ತೆರೆಗೆ ಕಾಲಿಟ್ಟಿದ್ದ ಪುನೀತ್
1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್‌ಗೆ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು.
2002ರಲ್ಲಿ ತೆರೆ ಕಂಡ ಅಪ್ಪು ಸಿನಿಮಾ ಮೂಲಕ ಪುನೀತ್ ಪೂರ್ಣ ಪ್ರಮಾಣದ ನಟನಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅಲ್ಲಿಂದ ಈವರೆಗೆ ಸುಮಾರು 25 ಸಿನಿಮಾಗಳಲ್ಲಿ ಪುನೀತ್ ನಟಿಸಿದ್ದಾರೆ. ಪ್ರೇಮದ ಕಾಣಿಕೆ ಸಿನಿಮಾ ತೆರೆಕಂಡು ಸುಮಾರು 45 ವರ್ಷಗಳು ಕಳೆದಿವೆ.