ಪುನೀತ್ ರಾಜ್ಕುಮಾರ್ ಅಭಿನಯದ 'ಜೇಮ್ಸ್' ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾ ಚಿತ್ರೀಕರಣಕ್ಕಾಗಿ ಚಿತ್ರತಂಡ ಕಾಶ್ಮೀರಕ್ಕೆ ಹೊರಟುನಿಂತಿತ್ತು. ಆದರೆ ರಾಘವೇಂದ್ರ ರಾಜ್ಕುಮಾರ್, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಪುನೀತ್ ತಮ್ಮ ಕಾಶ್ಮೀರ ಪ್ರಯಾಣವನ್ನು ಮುಂದೂಡಿದ್ದಾರೆ.
ರಾಘಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಕಾಶ್ಮೀರಕ್ಕೆ ತೆರಳಲಿರುವ ಪುನೀತ್ - James Kannada movie
'ಜೇಮ್ಸ್' ಚಿತ್ರತಂಡ ಕಾಶ್ಮೀರದ ಸುಂದರ ತಾಣಗಳಲ್ಲಿ ಚಿತ್ರೀಕರಣ ಮಾಡಲು ನಿರ್ಧರಿಸಿದೆ. ರಾಘವೇಂದ್ರ ರಾಜ್ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಅವರ ಆರೋಗ್ಯ ವಿಚಾರಿಸಿ ನಂತರ ಪುನೀತ್ ಕಾಶ್ಮೀರಕ್ಕೆ ಪ್ರಯಾಣಿಸಲಿದ್ದಾರೆ ಎನ್ನಲಾಗುತ್ತಿದೆ.
ರಾಘವೇಂದ್ರ ರಾಜ್ಕುಮಾರ್ ಇಂದು ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗುವ ಸಾಧ್ಯತೆ ಇದ್ದು, ಬಹುಶ: ಇನ್ನೆರಡು ದಿನಗಳಲ್ಲಿ ಪುನೀತ್ ಕಾಶ್ಮೀರಕ್ಕೆ ಪ್ರಯಾಣಿಸುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ 'ಜೇಮ್ಸ್' ಚಿತ್ರೀಕರಣ ಮಾಡಲಾಗಿದೆ. ಇದೀಗ, ಒಂದು ಹಾಡು ಮತ್ತು ಮಹತ್ವದ ದೃಶ್ಯಗಳನ್ನು ಚಿತ್ರೀಕರಣ ಮಾಡಲು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪುನೀತ್ ಕೂಡಾ ಸದ್ಯದಲ್ಲೇ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.ಈ ಕುರಿತು ಮಾತನಾಡಿರುವ ನಿರ್ದೇಶಕ 'ಬಹದ್ದೂರ್' ಚೇತನ್, `"ಸಿನಿಮಾದ ಕೆಲವು ಪ್ರಮುಖ ದೃಶ್ಯಗಳನ್ನು ಮತ್ತು ಒಂದು ಹಾಡನ್ನು ಕಾಶ್ಮೀರದ ಸುಂದರ ಲೊಕೇಶನ್‍ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. 10 ದಿನಗಳ ಶೆಡ್ಯೂಲ್ ಹಾಕಿಕೊಂಡಿದ್ದೇವೆ. ಈ ತಿಂಗಳ ಕೊನೆಗೆ ಈ ಹಂತದ ಚಿತ್ರೀಕರಣ ಮುಗಿಸಿ, ಬೆಂಗಳೂರಿಗೆ ವಾಪಸ್ಸಾಗಲಿದ್ದೇವೆ. ಆ ನಂತರ ಬೆಂಗಳೂರಿನಲ್ಲೇ ಚಿತ್ರೀಕರಣ ಮುಂದುವರೆಯಲಿದೆ" ಎನ್ನುತ್ತಾರೆ.'ಜೇಮ್ಸ್' ಚಿತ್ರದಲ್ಲಿ ಪುನೀತ್‍ಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದು, ಮುಖೇಶ್ ರಿಷಿ, ಶ್ರೀಕಾಂತ್ ಮುಂತಾದವರು ಅಭಿನಯಿಸುತ್ತಿದ್ದಾರೆ. ಚರಣ್‍ರಾಜ್ ಈ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ.