ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ ಕೊನೆಯ ಚಿತ್ರ ರಿಲೀಸ್‌ಗೆ ರೆಡಿಯಾಗಿದೆ. ಪ್ಯಾನ್ ಇಂಡಿಯಾ ಹಿರಿಮೆಯ 'ಜೇಮ್ಸ್' ಪುನೀತ್ ಅವರ ಜನ್ಮದಿನದಂದೇ (ಮಾರ್ಚ್ 17) ದೇಶಾದ್ಯಂತ 4 ಸಾವಿರ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ತಮಿಳು, ಹಿಂದಿ, ತೆಲುಗು, ಮಲಯಾಳಂ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದ್ದು, ಕರ್ನಾಟಕದ 400 ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈಗಾಗಲೇ ಸೆನ್ಸಾರ್ ಮಂಡಳಿಯಿಂದ U/A ಪ್ರಮಾಣಪತ್ರ ಸಿಕ್ಕಿದೆ.
ಚೇತನ್ ಕುಮಾರ್ ನಿರ್ದೇಶಿಸಿರುವ 'ಜೇಮ್ಸ್' ಡಬ್ಬಿಂಗ್ ಕೆಲಸ ಮುಗಿಯುವುದಕ್ಕೂ ಮೊದಲೇ ಪುನೀತ್ ಹೃದಯಾಘಾತದಿಂದ ನಿಧನರಾಗಿದ್ದರು. ಹೀಗಾಗಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ. ಮೋಷನ್ ಪಿಕ್ಚರ್, ಟೀಸರ್ ಮತ್ತು ಹಾಡುಗಳ ಮೂಲಕ ಈಗಾಗಲೇ ಸಿನಿಮಾ ಪ್ರೇಮಿಗಳಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿರುವ ಸಿನಿಮಾ ವೀಕ್ಷಿಸಲು ಪುನೀತ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.