ಇತ್ತೀಚೆಗೆ ನಟಿ ರಚಿತಾ ರಾಮ್ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲವರು ರಚಿತಾರಾಮ್ ಮದುವೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಇನ್ನು ಈ ಹಿಂದೆ ಸಂದರ್ಶನವೊಂದರಲ್ಲಿ ಮದುವೆ ಬಗ್ಗೆ ಮಾತನಾಡಿದ್ದ ರಚಿತಾ ರಾಮ್
ಇನ್ನು ಈ ಮಾತುಗಳನ್ನೇ ಆಧಾರವಾಗಿಟ್ಟುಕೊಂಡು ಕೆಲವರು ನಿಖಿಲ್ ಕುಮಾರಸ್ವಾಮಿ ಮತ್ತು ರಚಿತಾ ನಡುವೆ ಗುಸು-ಪಿಸು ನಡೆಯುತ್ತಿದೆ. ಅವರಿಬ್ಬರ ನಡುವೆ ಮದುವೆ ಮಾತುಕತೆಗಳು ನಡೆಯುತ್ತಿವೆ ಎಂದು ಕೆಲವು ಮಾಧ್ಯಮಗಳಲ್ಲಿ ಮತ್ತು ಸಾಮಾಜಿ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿತ್ತು. ಇಂದು ನಿಖಿಲ್ ಕುಮಾರಸ್ವಾಮಿ ಬರ್ತ್ ಡೇ ಇದ್ದು, ಈ ರೀತಿ ಮದುವೆ ಬಗ್ಗೆ ಸುಳ್ಳು ಸುದ್ದಿ ಹರಿದಾಡಿಸುವವರ ಬಗ್ಗೆ ರಚಿತಾ ಚಾಟಿ ಬೀಸಿದ್ದಾರೆ.