'ಬಾಹುಬಲಿ' ನಂತರ ಪ್ರಭಾಸ್ ನಟಿಸುತ್ತಿರುವ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ರಾಧೇಶ್ಯಾಮ್'. ರಾಧಾಕೃಷ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಬಹುತೇಕ ಚಿತ್ರೀಕರಣ ಇಟಲಿಯಲ್ಲಿ ನಡೆದಿದೆ. ಸದ್ಯಕ್ಕೆ ಚಿತ್ರತಂಡ ಇಟಲಿಯಲ್ಲಿ ಚಿತ್ರೀಕರಣ ಮುಗಿಸಿ ಮತ್ತೆ ಹೈದರಾಬಾದ್ಗೆ ವಾಪಸ್ಸಾಗಿದೆ.
ಇಟಲಿಯಲ್ಲಿ ಶೂಟಿಂಗ್ ಮುಗಿಸಿ ವಾಪಸ್ಸಾದ 'ರಾಧೇಶ್ಯಾಮ್' ಚಿತ್ರತಂಡ - Pooja hegde new movie
ರಾಧಾಕೃಷ್ಣ ನಿರ್ದೇಶನದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ 'ರಾಧೇಶ್ಯಾಮ್' ಇಟಲಿ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು ಚಿತ್ರತಂಡ ಹೈದರಾಬಾದ್ಗೆ ವಾಪಸ್ ಬಂದಿದೆ.
ಪ್ರಭಾಸ್ ಈ ಬಾರಿ ಇಟಲಿಯಲ್ಲೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಇಟಲಿಯಲ್ಲಿ ನಡೆಯಬೇಕಿದ್ದ ಎಲ್ಲಾ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು ಉಳಿದ ಭಾಗದ ಚಿತ್ರೀಕರಣ ಹೈದರಾಬಾದ್ ಹಾಗೂ ಸುತ್ತಮುತ್ತ ನಡೆಯಲಿದೆ. ಈಗಾಗಲೇ ರಾಮೋಜಿ ಫಿಲ್ಮ್ ಸಿಟಿ ಹಾಗೂ ಇನ್ನಿತರ ಕಡೆ ಚಿತ್ರದ ಸೆಟ್ ಸಿದ್ಧವಾಗಿದೆ. ಚಿತ್ರದಲ್ಲಿ ಪ್ರಭಾಸ್ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸುತ್ತಿದ್ದಾರೆ. ಬಾಲಿವುಡ್ ನಟಿ ಭಾಗ್ಯಶ್ರೀ ಕೂಡಾ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಗೋಪಿಕೃಷ್ಣ ಮೂವೀಸ್ ಹಾಗೂ ಯುವಿ ಕ್ರಿಯೇಷನ್ಸ್ ಒಟ್ಟಿಗೆ ಸೇರಿ 'ರಾಧೇಶ್ಯಾಮ್' ಚಿತ್ರವನ್ನು ನಿರ್ಮಿಸುತ್ತಿದೆ. ಮುರಳಿ ಶರ್ಮಾ, ಸಚಿನ್ ಖೇಡೇಕರ್, ಪ್ರಿಯದರ್ಶಿ ಪುಲಿಕೊಂಡ, ಕುನಾಲ್ ರಾಯ್ ಕಪೂರ್, ರಿದ್ದಿ ಕುಮಾರ್, ಸತ್ಯನ್ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಜಸ್ಟಿನ್ ಪ್ರಭಾಕರನ್ ಸಂಗೀತ ನೀಡಿದ್ದಾರೆ. 2021 ಜನವರಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.