ಕರ್ನಾಟಕ

karnataka

ETV Bharat / sitara

'ಲಾ' ಚಿತ್ರದ ಆ್ಯಕ್ಟಿಂಗ್​​​​​​ ಅನುಭವ ಹಂಚಿಕೊಂಡ ರಾಗಿಣಿ ಚಂದ್ರನ್​​​

ಪ್ರಜ್ವಲ್ ದೇವರಾಜ್​ ಪತ್ನಿ ರಾಗಿಣಿ ಚಂದ್ರನ್ 'ಲಾ' ಚಿತ್ರದ ಮೂಲಕ ಸ್ಯಾಂಡಲ್​ವುಡ್​​​ಗೆ ಎಂಟ್ರಿ ಕೊಟ್ಟಿದ್ದು ಜುಲೈ 17 ರಂದು ಈ ಚಿತ್ರ ಒಟಿಟಿ ಪ್ಲಾಟ್​​​​​​​ಫಾರ್ಮ್​ನಲ್ಲಿ ಬಿಡುಗಡೆಯಾಗಲಿದೆ.

By

Published : Jul 3, 2020, 7:04 PM IST

Law movie will release on July 17th
ಜುಲೈ 17 ರಂದು ಲಾ ಬಿಡುಗಡೆ

ಕನ್ನಡದ 'ಲಾ' ಸಿನಿಮಾ ಬಿಡುಗಡೆ ಬಗ್ಗೆ ಚಿತ್ರದ ನಾಯಕಿ, ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್​​​​ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ 'ಲಾ' ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ನಟಿ ರಾಗಿಣಿ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಕೆಲವೊಂದು ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ರಾಗಿಣಿ ಚಂದ್ರನ್ ಮೊದಲ ಸಿನಿಮಾ ಲಾ

'ಲಾ' ಸಿನಿಮಾ ಕ್ರೈಂ ಥ್ರಿಲ್ಲರ್‌ ಕಥೆಯನ್ನು ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಎಂಬ ಹೆಣ್ಣುಮಗಳ ಪಾತ್ರದ ಸುತ್ತ ಕಥೆ ಹೆಣೆಯಲಾಗಿದೆ. ಆಸಕ್ತಿಕರ ನಿರೂಪಣೆ ಈ ಚಿತ್ರದ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ ರಾಗಿಣಿ ಚಂದ್ರನ್‌. 'ಲಾ' ಚಿತ್ರದಲ್ಲಿ ಅಭಿನಯಿಸಲು ಸಿಕ್ಕ ಅವಕಾಶದ ಬಗ್ಗೆ ಮಾತನಾಡುತ್ತಾ, ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಈ ಚಿತ್ರಕಥೆಯೇ ಕಾರಣ. ನಿರ್ದೇಶಕ ರಘು ಸಮರ್ಥ್‌ ಚಿತ್ರದ ಬಗ್ಗೆ ಹೇಳಿದಾಗ ಸ್ಕ್ರಿಪ್ಟ್‌ ಇಷ್ಟವಾಗಿ ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡೆ ಎಂದು ತಿಳಿಸಿದ್ದಾರೆ.

ಜುಲೈ 17 ರಂದು ಲಾ ಬಿಡುಗಡೆ

ರೊಮ್ಯಾಂಟಿಕ್‌ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸುವುದು ನನಗೆ ಇಷ್ಟವಿರಲಿಲ್ಲ. ಚಾಲೆಂಜಿಂಗ್‌ ಪಾತ್ರ ಹಾಗೂ ಉತ್ತಮ ಚಿತ್ರಕಥೆ ಹೊಂದಿರುವ 'ಲಾ' ಚಿತ್ರದಲ್ಲಿ ಅಭಿನಯಿಸಿರುವುದು ನನಗೆ ಸಂತಸ ತಂದಿದೆ ಎಂದು ರಾಗಿಣಿ ಚಂದ್ರನ್‌ ತಿಳಿಸಿದ್ದಾರೆ. ಚಿತ್ರವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಎಂ.ಗೋವಿಂದ್ ನಿರ್ಮಾಣ ಮಾಡಿದ್ದು ,ರಘು ಸಮರ್ಥ್‌ ನಿರ್ದೇಶನ ಮಾಡಿದ್ದಾರೆ.

ಒಟಿಟಿ ಪ್ಲಾಟ್​​​ಫಾರ್ಮ್​ನಲ್ಲಿ ಬಿಡುಗಡೆಯಾಗಲಿರುವ ಲಾ

ಚಿತ್ರದಲ್ಲಿ ಮುಖ್ಯಮಂತ್ರಿ ಚಂದ್ರು, ಅಚ್ಯುತ್‌ ಕುಮಾರ್‌, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟಿಟಿ ಪ್ಲಾಟ್ ಫಾರ್ಮ್​ನಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕನ್ನಡ ಸಿನಿಮಾ 'ಲಾ'. ಜುಲೈ 17ರಂದು ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಭಾರತ ಸೇರಿದಂತೆ ವಿಶ್ವಾದ್ಯಂತ ಸುಮಾರು 200 ದೇಶಗಳಲ್ಲಿ ಬಿಡುಗಡೆಯಾಗಲಿದೆ.

ABOUT THE AUTHOR

...view details