ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಸ್ಪರ್ಧಿಸುತ್ತಾರೆ ಎಂಬ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಅಲ್ಲದೆ ಇತ್ತೀಚೆಗೆ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ರಜಿನಿ ಮಕ್ಕಳ ಮಂದ್ರಮ್ ಪಕ್ಷದ ಜೊತೆ ಚರ್ಚಿಸಿದ್ದರು. ಆದ್ರೀಗ ರಜಿನಿಕಾಂತ್ ರಾಜಕೀಯಕ್ಕೆ ಗುಡ್ ಬೈ ಹೇಳುತ್ತಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆ ಪತ್ರದಲ್ಲಿ, ರಜನಿಕಾಂತ್ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ರಾಜಕೀಯದಿಂದ ಹೊರ ಉಳಿಯಲು ನಿರ್ಧರಿಸಿದ್ದಾರೆ ಎಂದು ಬರೆಯಲಾಗಿದೆ. ಈ ಪತ್ರ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.