ಈ ಬಾರಿ ರಜನೀಕಾಂತ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬ ಗುಸುಗುಸು ಬೆನ್ನಲ್ಲೇ ಸೂಪರ್ ಸ್ಟಾರ್ ರಜನೀಕಾಂತ್ ಇವೆಲ್ಲಾ ರೂಮರ್ಗಳನ್ನು ನಿರಾಕರಿಸಿ ನಾನು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ಸಿನಿಮಾಗಳ ಮೇಲೆ ನನ್ನ ಹೆಚ್ಚಿನ ಗಮನ ನೀಡುವುದಾಗಿ ಹೇಳಿದ್ದರು. ಇದೀಗ ಎ.ಆರ್. ಮುರುಗದಾಸ್ ನಿರ್ದೇಶನದಲ್ಲಿ ರಜನಿ 'ದರ್ಬಾರ್' ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾ ಶೂಟಿಂಗ್ ಸದ್ಯದಲ್ಲೇ ಆರಂಭವಾಗಲಿದೆ. ಹಾಗೆ ಸಿನಿಮಾವನ್ನು 2020 ರ ಸಂಕ್ರಾಂತಿ ಸಮಯದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಆಗಲೇ ಪ್ಲ್ಯಾನ್ ಮಾಡಿದೆ.
'ದರ್ಬಾರ್' ಜೊತೆಗೆ ಮತ್ತೆ ಎರಡು ಹೊಸ ಸಿನಿಮಾಗಳಿಗೆ ಸಹಿ ಹಾಕಿದ ತಲೈವಾ - undefined
ಸೂಪರ್ ಸ್ಟಾರ್ ರಜನೀಕಾಂತ್ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಉತ್ಸಾಹ. ಅವರ ಪ್ರತಿ ಸಿನಿಮಾ ಬಿಡುಗಡೆಯಾದಾಗ ಮುಂದಿನ ಸಿನಿಮಾ ಯಾವುದಿರಬಹುದು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ.
ರಜನೀಕಾಂತ್
ಈ ಸಿನಿಮಾ ಜೊತೆಗೆ ಸೂಪರ್ ಸ್ಟಾರ್ ಮತ್ತೆರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಕೆ.ಎಸ್. ರವಿಕುಮಾರ್ ನಿರ್ದೇಶನದ ಸಿನಿಮಾ ಈ ವರ್ಷದ ಕೊನೆಯಲ್ಲಿ ಆರಂಭವಾಗಲಿದೆ. ಸಿನಿಮಾಗೆ ಇನ್ನೂ ಹೆಸರಿಡಲಾಗಿಲ್ಲ. ಮತ್ತೊಂದು ಸಿನಿಮಾ ವಿನುತ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು ಸಿನಿಮಾಗೆ 'ಖಾಕಿ' ಎಂದು ಹೆಸರಿಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು ರಜನಿ ಕಾರ್ತಿಕ್ ಸುಬ್ಬರಾಜು ನಿರ್ದೇಶನದಲ್ಲಿ ಮತ್ತೊಮ್ಮೆ ಕೆಲಸ ಮಾಡಬೇಕೆಂಬ ಅಭಿಲಾಷೆ ವ್ಯಕ್ತಪಡಿಸುತ್ತಿದ್ದಾರೆ. ಕಾರ್ತಿಕ್ ಸದ್ಯಕ್ಕೆ ಧನುಷ್ ನಟನೆ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.