ತಮಿಳು ಸೂಪರ್ ಸ್ಟಾರ್ ರಜನಿ ಕಾಂತ್ ಅವರು ಅವರು 'ಐಕಾನ್ ಆಫ್ ಗೋಲ್ಡನ್ ಜುಬಿಲಿ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಈ ಬಗ್ಗೆ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವರಾದ ಪ್ರಕಾಶ್ ಜಾವಡೇಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.

ಗೋವಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ. ರಜನಿಕಾಂತ್ ತಮ್ಮ ಜೀವನದಲ್ಲಿ ಮಾಡಿರುವ ಸಾಧನೆಗೆ ಮತ್ತು ಕಳೆದ ಹಲವು ದಶಕಗಳಿಂದ ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಗೆ ಈ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. ಅಲ್ಲದೆ ರಜನಿ ಕಾಂತ್ರನ್ನು ಆಯ್ಕೆ ಮಾಡಿದ್ದಕ್ಕೆ ನನಗೆ ಹೆಮ್ಮೆ ಅನಿಸುತ್ತಿದೆ ಎಂದು ಪ್ರಕಾಶ್ ಜವಡೇಕರ್ ಟ್ವೀಟ್ ಮಾಡಿದ್ದಾರೆ.
ಗೋವಾದಲ್ಲಿ ಐಎಫ್ಎಫ್ಐ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ನವೆಂಬರ್ 20 ರಿಂದ 28ರವರೆಗೆ ನಡೆಯಲಿದೆ. ಈ ಫೆಸ್ಟ್ನಲ್ಲಿ ಸುಮಾರು 250 ಸಿನಿಮಾಗಳನ್ನು ಪ್ರದರ್ಶನ ಮಾಡುವ ಯೋಜನೆಯಿದೆ. ಈ ಸಿನಿಮೋತ್ಸವದಲ್ಲಿ ಬೇರೆ ಬೇರೆ ದೇಶದ, ಹಲವಾರು ವಿಷಯಕ್ಕೆ ಸಂಬಂಧಿಸಿದ ಸಿನಿಮಾಗಳನ್ನು ತೋರಿಸಲಾಗುತ್ತದೆ.
ಇನ್ನು ಇದೇ ಕಾರ್ಯಕ್ರಮದಲ್ಲಿ ಫ್ರೆಂಚ್ ನಟಿ ಇಸಬೆಲ್ ಎಂಬುವವರಿಗೂ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅಲ್ಲದೆ ಇವರಿಗೆ ಜೀವಮಾನದ ಸಾಧನೆಗಾಗಿ ಈ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.