ಮುಂಬೈ:ರಾಜಕುಮಾರ್ ರಾವ್ ಮತ್ತು ಜಾನ್ವಿ ಕಪೂರ್ ಅಭಿನಯದ ಹಾರರ್ ಕಾಮಿಡಿ ಸಿನಿಮಾ "ರೂಹಿ" ಇದೇ ಮಾರ್ಚ್ 11 ರಂದು ಸಿನಿಮಾ ಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ ಎಂದು ಸಿನಿಮಾ ತಯಾರಕರು ಇಂದು ತಿಳಿಸಿದ್ದಾರೆ.
ಕೋವಿಡ್-19 ಸುರಕ್ಷತಾ ಪ್ರೋಟೊಕಾಲ್‌ಗಳನ್ನು ಅನುಸರಿಸಿ ಫೆಬ್ರವರಿ 1 ರಿಂದ ದೇಶಾದ್ಯಂತ ಸಿನೆಮಾ ಮಂದಿರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅನುಮತಿ ನೀಡಿದ ನಂತರ ಚಿತ್ರಮಂದಿರಗಳಿಗೆ ಆಗಮಿಸಿದ ಮೊದಲ ಬಾಲಿವುಡ್ ಸಿನಿಮಾ ಇದಾಗಲಿದೆ.