ಮಗಳು ಜಾನಕಿ ಧಾರಾವಾಹಿಯಲ್ಲಿ ನಾಯಕ ನಿರಂಜನ್ ಆಗಿ ನಟಿಸಿ ಸೈ ಎನಿಸಿಕೊಂಡಿರುವ ರಾಕೇಶ್ ಮಯ್ಯ ಇದೀಗ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ. ಭಾಸ್ಕರ್ ನೀನಾಸಂ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರವನ್ನು ಒಳಗೊಂಡಿರುವ "ಸದ್ದು ವಿಚಾರಣೆ ನಡೆಯುತ್ತಿದೆ" ಸಿನಿಮಾದಲ್ಲಿ ನಾಯಕರಾಗಿ ನಟಿಸಲಿದ್ದಾರೆ ರಾಕೇಶ್ ಮಯ್ಯ. ಈಗಾಗಲೇ 96, ಶುಭಮಂಗಳ ಸಿನಿಮಾದಲ್ಲಿ ನಟಿಸಿರುವ ರಾಕೇಶ್ ಮಯ್ಯ ಇದೇ ಮೊದಲ ಬಾರಿಗೆ ಸ್ಯಾಂಡಲ್ ವುಡ್ ನಲ್ಲಿ ನಾಯಕರಾಗಿ ಮೋಡಿ ಮಾಡಲಿದ್ದಾರೆ.
ಭಾಸ್ಕರ್ ನೀನಾಸಂ ಅವರ ನಿರ್ದೇಶನದ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ನನಗೆ ತುಂಬಾ ಸಂತಸವಾಗುತ್ತಿದೆ. ಹಿರಿಯ ಕಲಾವಿದರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಹೇಳುವ ರಾಕೇಶ್ ಮಯ್ಯ ಕಿರುತೆರೆಯ ಮೂಲಕ ನಟನಾ ಪಯಣ ಶುರು ಮಾಡಿದರು.