ಹೈದರಬಾದ್ :ಬಾಲ ನಟನಾಗಿ ಮುಗ್ಧ ಅಭಿನಯದಿಂದ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದ ಡಾ.ರಾಜ್ ಕುಮಾರ್ರ ಮುದ್ದಿನ ಮಗ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಅಸುನೀಗಿದ್ದಾರೆ. ಇವರ ಅಗಲಿಕೆಗೆ ಚಿತ್ರರಂಗದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ತೆಲಗು ಖ್ಯಾತ ನಿರ್ದೇಶಕ ರಾಜಮೌಳಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪುನೀತ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅಂತಹ ಯುವ ಮತ್ತು ರೋಮಾಂಚಕ ವ್ಯಕ್ತಿತ್ವ ಇಷ್ಟು ಬೇಗ ಕಣ್ಮರೆಯಾಯಿತು. ಅವರನ್ನು ಕೇವಲ ಒಂದೆರಡು ಬಾರಿ ಭೇಟಿಯಾಗಿದ್ದೆ. ಆದರೆ,ಅವರ ಆತಿಥ್ಯ, ವಿನಮ್ರ ಮತ್ತು ಡೌನ್ ಟು ಅರ್ಥ್ ಸ್ವಭಾವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಕುಟುಂಬ ಮತ್ತು ಪ್ರೀತಿ ಪಾತ್ರರಿಗೆ ಈ ದುಃಖ ಭರಿಸುವ ಶಕ್ತಿ ಬರಲಿ.
ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಟ್ವೀಟ್ ಮಾಡಿದ್ದು, ಪುನೀತ್ ರಾಜ್ಕುಮಾರ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು!! ಈ ಸುದ್ದಿ ಕೇಳಿ ಆಘಾತ ಮತ್ತು ಹೃದಯ ವಿದ್ರಾವಕವಾಗಿದೆ!! ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.