ಜೆಂಟಲ್ಮ್ಯಾನ್, ಭಾರತೀಯುಡು, ಅಪರಿಚಿತುಡು, ಎಂದಿರನ್ನಂಥ ಸಿನಿಮಾಗಳನ್ನು ಭಾರತೀಯ ಚಿತ್ರರಂಗಕ್ಕೆ ನೀಡಿದ ಖ್ಯಾತ ನಿರ್ದೇಶಕ ಎಸ್. ಶಂಕರ್, ಇದೀಗ ರಾಮ್ಚರಣ್ ಜೊತೆ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಇಂಡಿಯನ್ ಖ್ಯಾತಿಯ ಎಸ್. ಶಂಕರ್ ನಿರ್ದೇಶನದಲ್ಲಿ ರಶ್ಮಿಕಾ...? - Ramcharan Teja new movie
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಎಸ್. ಶಂಕರ್ ನಿರ್ದೇಶನದ ಸಿನಿಮಾವೊಂದರಲ್ಲಿ ರಶ್ಮಿಕಾ, ರಾಮ್ಚರಣ್ ತೇಜಗೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ದರ್ಶನ್ ಶೂಟಿಂಗ್ಗೆ ಹೋಗೋದು ಯಾವಾಗ...ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು
ಎಸ್. ಶಂಕರ್ ಅವರಿಗೆ ಇದು 15ನೇ ಸಿನಿಮಾವಾಗಿದ್ದು ರಾಮ್ಚರಣ್ ತೇಜಗೆ ಕೂಡಾ ಇದು 15 ನೇ ಸಿನಿಮಾ ಎಂಬುದು ವಿಶೇಷ. ಪೊಲಿಟಿಕಲ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ಗೆ ಇದು 50ನೇ ಸಿನಿಮಾ. ಇನ್ನೂ ಹೆಸರಿಡದ ಈ ಚಿತ್ರವನ್ನು 3 ಡಿ ಮಾದರಿಯಲ್ಲಿ ನಿರ್ದೇಶಿಸಲು ಶಂಕರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇನ್ನು ಚಿತ್ರದ ಹಾಡುಗಳಿಗೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದಲ್ಲಿ ಮಿಂಚಿ ಈಗ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಸಿದ್ದಾರ್ಥ್ ಮಲ್ಹೋತ್ರ ಜೊತೆ ಮಿಷನ್ ಮಜ್ನು ಹಾಗೂ ಇನ್ನೂ ಹೆಸರಿಡದ ಸಿನಿಮಾವೊಂದರಲ್ಲಿ ಅಮಿತಾಬ್ ಬಚ್ಚನ್ ಪುತ್ರಿಯಾಗಿ ನಟಿಸುತ್ತಿದ್ದಾರೆ. ಎರಡೂ ಸಿನಿಮಾಗಳಲ್ಲಿ ಬ್ಯುಸಿ ಇದ್ದರೂ ಶಂಕರ್ ಸಿನಿಮಾವಾದ್ದರಿಂದ ಈ ಚಿತ್ರದಲ್ಲಿ ಅವರು ನಟಿಸಲು ಒಪ್ಪಿದ್ದಾರೆ ಎನ್ನಲಾಗುತ್ತಿದೆ.