ಸುಕುಮಾರ್ ನಿರ್ದೇಶನ ಹೇಳಿರುವ ಹಾಗೂ ಟಾಲಿವುಡ್ನ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಪುಷ್ಪ ಚಿತ್ರ ದಿನದಿಂದ ದಿನಕ್ಕೆ ತನ್ನ ಕ್ರೇಜ್ ಅನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಹಿಂದೆ ನಟ ಅಲ್ಲು ಅರ್ಜುನ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಅಭಿಮಾನಿಗಳ ಬಳಗ ಹೆಚ್ಚಿಸಿಕೊಂಡಿದ್ದ ಚಿತ್ರ ತಂಡ ಈಗ ನಾಯಕಿಯ ಫಸ್ಟ್ ಲುಕ್ ರಿವೀಲ್ ಮಾಡಿ ಮತ್ತಷ್ಟು ಗಮನ ಸೆಳೆದಿದೆ.
ಬಹು ನಿರೀಕ್ಷಿತ ಪುಷ್ಪ ಚಿತ್ರದ ನಟಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ರಿವೀಲ್ - ರಶ್ಮಿಕಾ ಮಂದಣ್ಣ ಫಸ್ಟ್ ಲುಕ್
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಪುಷ್ಪ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲುಕ್ ಅನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. ಹಾಗಾಗಿ ಸಿನಿಮಾ ದಿನದಿಂದ ದಿನಕ್ಕೆ ತನ್ನ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ.
ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲುಕ್ ಇದಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ರಶ್ಮಿಕಾ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರಕ್ಕೆ ಬಣ್ಣ ಹಚ್ಚಿದ್ದು ಹಾಟ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಅವರ ಪೋಸ್ಟರ್ ಭಾರಿ ಸದ್ದು ಮಾಡುತ್ತಿದೆ.
ಹಳ್ಳಿಯ ಸೊಗಡಿನಂತೆ ಕನ್ನಡಿಯ ಮುಂದೆ ಕುಳಿತು ಸಿಂಗಾರ ಮಾಡಿಕೊಳ್ಳುತ್ತಿರುವ ಪೋಸ್ಟರ್ ಇದಾಗಿದ್ದು ಅಭಿಮಾನಿಗಳಿಗೆ ಸಿನಿಮಾ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ರಶ್ಮಿಕಾ ಮಂದಣ್ಣ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪಾತ್ರದ ಮೊದಲ ಲುಕ್ ಹಂಚಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಮಲಯಾಳಂ ನಟ ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.