ಕರ್ನಾಟಕ

karnataka

ETV Bharat / sitara

ವಿದೇಶಕ್ಕೆ ಹಾರಿದ ರಶ್ಮಿಕಾ: ಕೈಯಲ್ಲಿ ಪಾಸ್​ಪೋರ್ಟ್​ ಹಿಡಿದು ಅಭಿಮಾನಿಗಳ ತಲೆಗೆ ಹುಳ ಬಿಟ್ಟ ನಟಿ - ರಶ್ಮಿಕಾ ಮಂದಣ್ಣ ಮುಂದಿನ ಚಿತ್ರ ಮಿಷನ್​ ಮಜ್ನು

ನಟಿ ರಶ್ಮಿಕಾ ಮಂದಣ್ಣ ಅಮೆರಿಕಕ್ಕೆ ತೆರಳಿದ್ದಾರೆ ಎನ್ನಲಾಗ್ತಿದ್ದು, ಈ ಕುರಿತಾದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ.

Rashmika, Vijay Devokonda
ರಶ್ಮಿಕಾ, ವಿಜಯ್​ ದೇವರಕೊಂಡ

By

Published : Nov 24, 2021, 4:04 PM IST

ಹೈದರಾಬಾದ್: ಮಿಷನ್​ ಮಜ್ನು ಸಿನಿಮಾದ ಮೂಲಕ ಬಾಲಿವುಡ್​ಗೆ ಪಾದಾರ್ಪಣೆ ಮಾಡಲಿರುವ ನಟಿ ರಶ್ಮಿಕಾ ಮಂದಣ್ಣ ಯುಎಸ್​ಎಗೆ ತೆರಳಿದ್ದಾರೆ. ಅಲ್ಲಿ ನಟ ವಿಜಯ್ ದೇವರಕೊಂಡ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗ್ತಿದೆ.

ಈ ಕುರಿತಂತೆ ಇನ್​ಸ್ಟಾಗ್ರಾಮ್​​ ಸ್ಟೋರಿಯಲ್ಲಿ ಪಾಸ್‌ಪೋರ್ಟ್‌ ಹಾಗೂ ವಿಮಾನದಲ್ಲಿ ಕುಳಿತುಕೊಂಡಿರುವ ಸೆಲ್ಫಿ ಫೋಟೋವನ್ನು ಹಂಚಿಕೊಂಡಿದ್ದು, 'ಈ ಬಾರಿ ನಿಮ್ಮಿಂದ ಸಾಕಷ್ಟು ದೂರವಿದ್ದೇನೆ. ಆದರೆ ಶೀಘ್ರದಲ್ಲೇ ಹಿಂತಿರುಗುತ್ತೇನೆ' ಎಂದು ಬರೆದಿದ್ದಾರೆ. ಆದರೆ ಯಾವ ದೇಶಕ್ಕೆ ತೆರಳುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.

ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಶೇರ್​ ಮಾಡಿದ ರಶ್ಮಿಕಾ ಮಂದಣ್ಣ

ಸದ್ಯ ಯುಎಸ್​ಎದಲ್ಲಿ ತೆಲುಗು ನಟ ವಿಜಯ್​ ದೇವರಕೊಂಡ ಮುಂಬರುವ ಲೈಗರ್ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದು, ರಶ್ಮಿಕಾ ಅವರನ್ನು ಭೇಟಿ ಮಾಡಲಿದ್ದಾರೆ. ರಶ್ಮಿಕಾ, ವಿಜಯ್ ಅವರನ್ನು ಭೇಟಿ ಮಾಡುವುದು ಹೊಸ ವಿಷಯವೇನಲ್ಲ. ಈ ಹಿಂದೆಯೂ ಗೋವಾದಲ್ಲಿ ಭೇಟಿ ಮಾಡಿದ್ದರು. ವಿಜಯ್ ಹಾಗೂ ರಶ್ಮಿಕಾ ತೆಲುಗಿನ ಗೀತಗೋವಿಂದಂ ಮತ್ತು ಡಿಯರ್ ಕಾಮ್ರೇಡ್‌ ಸಿನಿಮಾದಲ್ಲಿ ನಟಿಸಿದ್ದರು.

ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಶೇರ್​ ಮಾಡಿದ ರಶ್ಮಿಕಾ ಮಂದಣ್ಣ

ಸದ್ಯ ನಟಿ ರಶ್ಮಿಕಾ ಮಂದಣ್ಣ ಮಿಷನ್ ಮಜ್ನು ಚಿತ್ರದ ಜೊತೆಗೆ ನಟ ಅಮಿತಾಬ್ ಬಚ್ಚನ್ ಅಭಿನಯದ ಗುಡ್ ಬೈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಅಲ್ಲು ಅರ್ಜುನ್ ಅಭಿನಯದ ತೆಲುಗು ಚಿತ್ರ ಪುಷ್ಪದಲ್ಲಿ ರಶ್ಮಿಕಾ ನಟಿಸಿದ್ದಾರೆ.

ABOUT THE AUTHOR

...view details