ಮುಂಬೈ(ಮಹಾರಾಷ್ಟ್ರ): ಕಳೆದ ಕೆಲ ವಾರಗಳ ಹಿಂದೆ ತೆರೆ ಕಂಡು ಯಶಸ್ವಿ ಪ್ರದರ್ಶನ ಕಂಡಿರುವ ಅಲ್ಲು ಅರ್ಜುನ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ'ದಲ್ಲಿ ಕನ್ನಡದ ರಶ್ಮಿಕಾ ಮಂದಣ್ಣ ನಟಿಸಿದ್ದು, ಎಲ್ಲರಿಂದಲೂ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದಾರೆ. ಇದೀಗ ಹೊಸದೊಂದು ವಿಚಾರಕ್ಕೆ ಸಿಕ್ಕಾಪಟ್ಟೆ ಟ್ರೋಲ್ಗೊಳಗಾಗಿದ್ದಾರೆ.
ಬಹುಬೇಡಿಕೆ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣ ನಿನ್ನೆ ರಾತ್ರಿ ಮಹಾರಾಷ್ಟ್ರದ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದು, ಅವರ ಹಾಕಿಕೊಂಡಿರುವ ಡ್ರೆಸ್ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ಗೊಳಗಾಗಿದ್ದಾರೆ.
ರಶ್ಮಿಕಾ ಮಂದಣ್ಣ ಹೊಸ ಅವತಾರ ನೋಡಿ ಟ್ರೋಲ್ ಮಾಡಿದ ನೆಟ್ಟಿಗರು ಇದನ್ನೂ ಓದಿರಿ:ತೋತಾಪುರಿ ತೋಟ್ಟು ಕೀಳೋದಿಕ್ಕೆ ರೆಡಿಯಾದ ನವರಸ ನಾಯಕ : ಆಡಿಯೋ ಟೀಸರ್ ಬಿಡುಗಡೆ
ವಿಚಿತ್ರವಾದ ಡ್ರೆಸ್ ಹಾಕಿಕೊಂಡಿದ್ದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ಗೊಳಗಾಗಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಪುಷ್ಪ ಚಿತ್ರದಲ್ಲಿ ನಟನೆ ಮಾಡಿ ಸಿಕ್ಕಾಪಟ್ಟೆ ಯಶಸ್ಸುಗಳಿಸಿರುವ ಕಿರಿಕ್ ಪಾರ್ಟಿ ನಟಿ ರಶ್ಮಿಕಾ ಇದೀಗ ತಮ್ಮ ಸಂಭಾವನೆ ಸಹ ಹೆಚ್ಚಿಸಿಕೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ