ಕೊರೊನಾ ಮಧ್ಯೆಯೂ ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸದ್ಯ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಮನೆಗಳಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ.
ಕನ್ನಡ ಚಿತ್ರರಂಗದಲ್ಲಿ ಪ್ರತಿ ಹಬ್ಬವನ್ನ ಬಹಳ ಸಂಭ್ರಮ-ಸಡಗರದಿಂದ ಆಚರಿಸುವ ಸ್ಟಾರ್ ಕುಟುಂಬ ಅಂದ್ರೆ ರಿಯಲ್ ಸ್ಟಾರ್ ಉಪೇಂದ್ರ ಅವರದು. ಉಪೇಂದ್ರ ಅವರ ಮನೆಯಲ್ಲಿ ಸಂಕ್ರಾಂತಿ ಸಡಗರ ಮನೆ ಮಾಡಿದೆ.
ರಿಯಲ್ ಸ್ಟಾರ್ ಮನೆಯಲ್ಲಿ ಕಳೆಗಟ್ಟಿದ ಸಂಕ್ರಾಂತಿ! ಫೋಟೋ ನೋಡಿ: ರಿಯಲ್ ಸ್ಟಾರ್ ಮನೆಯಲ್ಲಿ ಕಳೆಗಟ್ಟಿದ ಸಂಕ್ರಾಂತಿ ಸಂಭ್ರಮ : ಫೋಟೋಸ್ ನೋಡಿ
ಹೊಸ ಭರವಸೆಯೊಂದಿಗೆ ಉಪ್ಪಿ ಕುಟುಂಬದವರು ಈ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ. ಮನೆಯಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಮಾಡಿ, ದೇವರಿಗೆ ನೈವೇದ್ಯ ಅರ್ಪಿಸಿ, ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ಈ ವೇಳೆ ಉಪೇಂದ್ರ, ಪತ್ನಿ ಪ್ರಿಯಾಂಕಾ ಉಪೇಂದ್ರ, ಮಕ್ಕಳಾದ ಐಶ್ವರ್ಯಾ, ಆಯುಷ್ ಫೋಟೋಗೆ ಪೋಸ್ ನೀಡಿದ್ದಾರೆ