ಕರ್ನಾಟಕ

karnataka

ETV Bharat / sitara

ಸಿನಿಮಾ ಕಾರ್ಮಿಕರ ಸಹಾಯಕ್ಕೆ ನಿಂತ ರಿಯಲ್​ ಸ್ಟಾರ್! - Cinema workers

ಕಳೆದ ಒಂದು ತಿಂಗಳಿನಿಂದ ಸಿನಿಮಾ‌ ಚಿತ್ರೀಕರಣ ಇಲ್ಲದೆ, ಸಿನಿಮಾ ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕಷ್ಟ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಸಿನಿಮಾ‌ ಕಾರ್ಮಿಕರ ಸಹಾಯಕ್ಕೆ ಬಂದಿದ್ದಾರೆ.

Upendra
ರಿಯಲ್​ ಸ್ಟಾರ್ ನಟ ಉಪೇಂದ್ರ

By

Published : May 10, 2021, 2:14 PM IST

ಕೊರೊನಾಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ದಿನಕ್ಕೆ ನೂರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೊರೊನಾ ಕಡಿಮೆ ಮಾಡಲು ರಾಜ್ಯ ಸರ್ಕಾರ ಲಾಕ್​ಡೌನ್ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಕೆಲ‌ ಸಿನಿಮಾ‌ ತಾರೆಯರು ಕಷ್ಟದಲ್ಲಿ ಇರುವ ಜನರಿಗೆ ಊಟ ಕೊಡುವ ಕೆಲಸ ಮಾಡುತ್ತಿದ್ದಾರೆ.

ಆದರೆ ಇದೀಗ ಸಿನಿಮಾ ನಂಬಿಕೊಂಡು ಜೀವನ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಸಿನಿಮಾ‌ ಚಿತ್ರೀಕರಣ ಇಲ್ಲದೆ, ಸಿನಿಮಾ ಕಾರ್ಮಿಕರು ಹಾಗೂ ಪೋಷಕ ಕಲಾವಿದರು ಕಷ್ಟ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಸಿನಿಮಾ‌ ಕಾರ್ಮಿಕರ ಸಹಾಯಕ್ಕೆ ಬಂದಿದ್ದಾರೆ.

ನೆರವಿಗೆ ಬಂದ ರಿಯಲ್​ ಸ್ಟಾರ್ ನಟ ಉಪೇಂದ್ರ

"ಕನ್ನಡ ಚಲನಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಗಳಿಗೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ಥರನ್ನು ಸಂಪರ್ಕಿಸಿ" ಅಂತಾ ಉಪೇಂದ್ರ ಹೇಳಿದ್ದಾರೆ. ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಕಾರ್ಮಿಕರಿಗೆ ಉಪೇಂದ್ರ ಸಹಾಯ ಮಾಡಿದ್ದರು.

ABOUT THE AUTHOR

...view details