ಮುಂಬೈ:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಾಗೂ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ.
ಅ. 6ರವರೆಗೆ ರಿಯಾ ನ್ಯಾಯಾಂಗ ಬಂಧನದಲ್ಲಿ.. ನಾಳೆ ಜಾಮೀನು ಅರ್ಜಿ ವಿಚಾರಣೆ - ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟಿ ರಿಯಾ ಚಕ್ರವರ್ತಿ ಅವರನ್ನು ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ.
ರಿಯಾ ನ್ಯಾಯಾಂಗ ಬಂಧನ ಮುಕ್ತಾಯಗೊಂಡ ಕಾರಣ ಹೆಚ್ಚಿನ ವಿಚಾರಣೆಗೋಸ್ಕರ ಮಾದಕ ವಸ್ತು ನಿಯಂತ್ರಣ ಸಂಸ್ಥೆ ಅವರನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ. ಈ ಮಧ್ಯೆ ಬಾಂಬೆ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರಿಂದ ನಾಳೆ ವಿಚಾರಣೆ ನಡೆಯಲಿದೆ.
ಡ್ರಗ್ಸ್ ಪ್ರಕರಣದಲ್ಲಿ ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಸೇರಿದಂತೆ ಅನೇಕರ ಹೆಸರು ಈಗಾಗಲೇ ಕೇಳಿ ಬಂದಿದ್ದು, ಅವರಿಗೂ ನೋಟಿಸ್ ಜಾರಿಗೊಳುವ ಸಾಧ್ಯತೆ ದಟ್ಟವಾಗಿದೆ. ಸದ್ಯ ಎನ್‌ಸಿಬಿ ವಶದಲ್ಲಿರುವ ರಿಯಾ ಚಕ್ರವರ್ತಿ ವಿಚಾರಣೆ ಮುಂದುವರೆದಿದೆ. ಇದರ ಜತೆಗೆ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ. 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.