ಕನ್ನಡ ಹಾಗು ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಚಿತ್ರ ರಾಬರ್ಟ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಎರಡು ಶೇಡ್ನಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ, ಬಿಡುಗಡೆ ಮುನ್ನವೇ ಸ್ಯಾಂಡಲ್ವುಡ್ನಲ್ಲಿ ಹೊಸ ದಾಖಲೆ ಬರೆಯಲಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಚಿತ್ರರಂಗವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಚಿತ್ರ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಕೂಡ ರಿಲೀಸ್ಗೂ ಮುನ್ನ ದಾಖಲೆ ಮಾಡಿತ್ತು. ಈ ಸಿನಿಮಾ ಬಿಡುಗಡೆಗೂ ಮುಂಚೆ, ಸಿನಿಮಾ ವಿತರಣೆಯ ಹಕ್ಕು 58 ಕೋಟಿ ರೂ. ಸೇಲ್ ಆಗಿತ್ತು. ಈಗ ರಾಬರ್ಟ್ ಸಿನಿಮಾ, ಕೆಜಿಎಫ್ ಚಿತ್ರದ ದಾಖಲೆ ಮುರಿದಿದೆ. ಸದ್ಯ, ಗಾಂಧಿನಗರದಲ್ಲಿ ಕೇಳಿ ಬರುತ್ತಿರುವ ಲೇಟೆಸ್ಟ್ ಸುದ್ದಿ ಎಂದರೆ, ರಾಬರ್ಟ್ ಸಿನಿಮಾ ಕೂಡ ಬಿಡುಗಡೆಗೂ ಮೊದಲೇ ಬರೋಬ್ಬರಿ ಚಿತ್ರ ವಿತರಣೆಯ ಹಕ್ಕಿನಂದ 78 ಕೋಟಿ ರೂ. ಪಡೆದಿದೆ.
ಇದನ್ನೂ ಓದಿ: ಯಾವನಿಗಿದೆ ಕನ್ನಡ ಕಿತ್ತುಕೊಳ್ಳುವ ತಾಕತ್ತು, ಬರೋಕೇಳಿ ನೋಡೋಣ: ನಟ ಕಿಚ್ಚ ಸುದೀಪ್
ಭವಾನಿ ಆರ್ಟ್ಸ್, ಮೆಹುಲ್ ಫಿಲ್ಮ್ಸ್ ಇಷ್ಟು ದೊಡ್ಡ ಮೊತ್ತ ಕೊಟ್ಟು ವಿತರಣೆ ಹಕ್ಕು ಪಡೆದಿದೆ ಎನ್ನಲಾಗಿದೆ. ಆದರೆ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗು ನಿರ್ದೇಶಕ ತರುಣ್ ಸುಧೀರ್ ಮಾತ್ರ ಈ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ವಿತರಣೆಯ ಹಕ್ಕು ದೊಡ್ಡ ಮಟ್ಟಕ್ಕೆ ಸೇಲ್ ಆಗುವ ಮೂಲಕ ಕೆಜಿಎಫ್ ಸಿನಿಮಾದ ದಾಖಲೆಯನ್ನು ರಾಬರ್ಟ್ ಚಿತ್ರ ಅಳಿಸಿ ಹಾಕಿದೆ ಅನ್ನೋದು ಗಾಂಧಿನಗರದಲ್ಲಿ ದಟ್ಟವಾಗಿ ಕೇಳಿ ಬರುತ್ತಿರುವ ಹೊಸ ಸುದ್ದಿ.
ರಾಬರ್ಟ್ ಚಿತ್ರದಲ್ಲಿ ದರ್ಶನ್ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದು, ವಿನೋದ್ ಪ್ರಭಾಕರ್ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಲನ್ ಪಾತ್ರದಲ್ಲಿ ಖ್ಯಾತ ನಟ ಜಗಪತಿ ಬಾಬು ಅಬ್ಬರಿಸಿದ್ದು ದೇವರಾಜ್, ರವಿಶಂಕರ್ ಸೇರಿದಂತೆ ದೊಡ್ಡ ಕಲಾವಿದರ ದಂಡೇ ಇದೆ. ಉಮಾಪತಿ ಶ್ರೀನಿವಾಸ್ ನಿರ್ಮಾಣ ಮಾಡಿರುವ ಸಿನಿಮಾಕ್ಕೆ ನಿರ್ದೇಶಕ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕರ್ನಾಟಕ ಆಂಧ್ರ, ತೆಲಂಗಾಣ ಸೇರಿದಂತೆ 1,400 ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆಯಾಗುತ್ತಿರುವುದು ದಚ್ಚು ಅಭಿಮಾನಿಗಳಿಗೆ ಸಂತಸ ತಂದಿದೆ.