ಹೈದರಾಬಾದ್(ತೆಲಂಗಾಣ):ಬಹು ನಿರೀಕ್ಷಿತ ಆರ್‌ಆರ್‌ಆರ್ ಚಿತ್ರ ಬಿಡುಗಡೆಗೆ ಇದೀಗ ಮತ್ತೊಮ್ಮೆ ಹೊಸ ದಿನಾಂಕ ನಿಗದಿಯಾಗಿದ್ದು, ಬಿಗ್ ಬಜೆಟ್ ಸಿನಿಮಾ ಮಾರ್ಚ್ 25ರಂದು ತೆರೆಗೆ ಅಪ್ಪಳಿಸಲಿದೆ. ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ RRR ಚಿತ್ರ ತಂಡ ಟ್ವಿಟರ್ನಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಈ ದಿನಾಂಕದಂದು ಬಿಡುಗಡೆಯಾಗುವುದು ಖಚಿತ ಎಂದು ತಿಳಿಸಿದೆ.
ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಬಿಗ್ ಬಜೆಟ್ ಚಿತ್ರದಲ್ಲಿ ರಾಮ್ ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ ಹಾಗೂ ಜೂ.ಎನ್‌ಟಿಆರ್ ಕೋಮರಂ ಭೀಮನಾಗಿ ನಟಿಸಿದ್ದಾರೆ. ನಾಯಕಿಯರಾಗಿ ಆಲಿಯಾ ಭಟ್ ಮತ್ತು ಒಲಿವಿಯಾ ಮೋರಿಸ್ ನಟಿಸಿದ್ದಾರೆ.
ಯಂಗ್ ಟೈಗರ್ ಎನ್‌ಟಿಆರ್, ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ 'RRR' ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗಾಗಲೇ ಹಲವು ಬಾರಿ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಿದ್ದ ಚಿತ್ರತಂಡ ಇದೀಗ ಮತ್ತೊಂದು ಹೊಸ ದಿನಾಂಕವನ್ನು ಅಭಿಮಾನಿಗಳ ಮುಂದಿಟ್ಟಿದೆ.