ಹೊಂಬಾಳೆ ಫಿಲಂಸ್ ಮತ್ತೊಂದು ದೇಶವ್ಯಾಪಿ ಸಿನಿಮಾಕ್ಕೆ ಕೈ ಹಾಕಿದೆ. ಈ ಚಿತ್ರದ ಬಗ್ಗೆ ಇಂದು ಮಹತ್ವದ ಮಾಹಿತಿ ಹೊರ ಬಿದ್ದಿದೆ. ಈ ಬಗ್ಗೆ ಹೊಂಬಾಳೆ ಫಿಲಂಸ್ ಮಾಹಿತಿ ನೀಡಿದ್ದು, ಹೊಸ ಸಿನಿಮಾಕ್ಕೆ 'ಸಲಾರ್' ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ಕೆಜಿಎಫ್ ಮತ್ತು ಉಗ್ರಂ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್, ಕಟ್ ಹೇಳುತ್ತಿದ್ದು, ಬಾಹುಬಲಿ ಖ್ಯಾತಿಯ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದಾರೆ.
ಈ ಹಿಂದೆ ತೆಲುಗಿನ ಖ್ಯಾತ ನಟರಿಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆ ಎಲ್ಲಾ ಗಾಳಿಸುದ್ದಿಗಳಿಗೆ ಇಂದು ತೆರೆ ಬಿದ್ದಿದ್ದು, ಪ್ರಭಾಸ್ ಅಭಿನಯದ ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನವಿರಲಿದೆ. ಸಿನಿಮಾಕ್ಕೆ ವಿಜಯ ಕಿರಗಂದೂರು ಬಂಡವಾಳ ಹಾಕುತ್ತಿದ್ದಾರೆ.