ಸಲಗ ಕನ್ನಡ ಚಿತ್ರರಂಗದಲ್ಲಿ ಹಲವಾರು ವಿಶೇಷತೆಗಳಿಗೆ ಸಖತ್ ಸದ್ದು ಮಾಡುತ್ತಿರುವ ಸಿನಿಮಾ. ದುನಿಯಾ ವಿಜಯ್ ಚೊಚ್ಚಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡು ವರ್ಷಗಳಿಂದ ಇದಕ್ಕಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಹಾಡುಗಳಿಂದ ಸೆನ್ಸೇಷನ್ ಕ್ರಿಯೇಟ್ ಮಾಡಿದೆ.
ಕೊರೊನಾದಿಂದಾಗಿ ಸಲಗ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಜೊತೆಗೆ ಸಲಗ ಸಿನಿಮಾ ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳುನಾಡಿನಲ್ಲೂ ಕ್ರೇಜ್ ಹುಟ್ಟುಹಾಕಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕೆಲ ದಿನಗಳ ಹಿಂದೆ ನಟ ದುನಿಯಾ ವಿಜಯ್ ತಮಿಳುನಾಡಿಗೆ ಪ್ರವಾಸ ಕೈಗೊಂಡಿದ್ದರು.
ಮಿಳುನಾಡಲ್ಲೂ ದುನಿಯಾ ವಿಜಯ್ ಕ್ರೇಜ್ ಈ ವಿಚಾರ ತಿಳಿದ ತಮಿಳುನಾಡಿನ ದುನಿಯಾ ವಿಜಯ್ ಅಭಿಮಾನಿಗಳು ದುನಿಯಾ ವಿಜಯ್ ಅವರನ್ನ ಭೇಟಿ ಮಾಡಿ ಸಲಗ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತಾ ಕೇಳಿದ್ದಾರೆ. ಜೊತೆಗೆ ದುನಿಯಾ ವಿಜಯ್ಗೆ ಅದ್ದೂರಿ ಸ್ವಾಗತದ ಜೊತೆ ಸನ್ಮಾನ ಮಾಡಿದ್ದಾರೆ. ಅಭಿಮಾನಿಗಳ ಪ್ರೀತಿಗೆ ವಿಜಯ್ ಮನಸೋತಿದ್ದಾರೆ.
ವಿಜಯ್ ನಿರ್ದೇಶಿಸಿ ನಟಿಸಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್, ಕಾಕ್ರೋಜ್ ಸುಧೀರ್ ಸೇರಿದಂತೆ ಸಾಕಷ್ಟು ಕಲಾವಿದರ ದಂಡೇ ಇದೆ. ಚರಣ್ ರಾಜ್ ಸಲಗ ಚಿತ್ರಕ್ಕೆ ಸಂಗೀತ ನೀಡಿದ್ದು, ಹಾಡುಗಳು ಈಗಾಗಲೇ ಸದ್ದು ಮಾಡ್ತಿವೆ. ಮಾಸ್ತಿ ಸಂಭಾಷಣೆ ಈ ಚಿತ್ರಕ್ಕಿದ್ದು, ಟಗರು ಸಿನಿಮಾ ನಿರ್ಮಾಣ ಮಾಡಿದ್ದ ಕೆ.ಪಿ ಶ್ರೀಕಾಂತ್ ಈ ಸಿನಿಮಾವನ್ನ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.
ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಪ್ರೇಕ್ಷಕರಿಗೆ ಅನುಮತಿ ಕೊಟ್ಟ ಬಳಿಕ ಸಲಗ ಚಿತ್ರಮಂದಿರಕ್ಕೆ ತರಲು ನಿರ್ಮಾಪಕ ಕೆ.ಪಿ ಶ್ರೀಕಾಂತ್ ಸಿದ್ಧತೆ ನಡೆಸಿದ್ದಾರೆ.