ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ, ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ನೀಡಿರುವುದು ಹಲವರಿಗೆ ಆತಂಕವನ್ನುಂಟು ಮಾಡಿದೆ. ಏಕೆಂದರೆ, ಶೇ. 100ರಷ್ಟು ಹಾಜರಾತಿ ಘೋಷಿಸಿದ ಮೇಲೆ 'ಪೊಗರು', 'ರಾಬರ್ಟ್' 'ಯುವರತ್ನ್' ಚಿತ್ರಗಳು ಬಿಡುಗಡೆಯಾಗಿದ್ದು, ಏಪ್ರಿಲ್ ತಿಂಗಳಲ್ಲಿ 'ಸಲಗ' ಮತ್ತು 'ಕೋಟಿಗೊಬ್ಬ- 3' ಚಿತ್ರಗಳು ಬಿಡುಗಡೆಯಾಗಬೇಕಿತ್ತು.
ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಹಾಜರಾತಿ ಘೋಷಿಸಿರುವುದರಿಂದ, ಈ ಚಿತ್ರಗಳು ಬಿಡುಗಡೆಯಾಗುತ್ತವೋ ಅಥವಾ ಮುಂದಕ್ಕೆ ಹೋಗುತ್ತವೋ ಎಂಬ ಗೊಂದಲ ಎಲ್ಲರಲ್ಲೂ ಮೂಡಿತ್ತು. ಇದೀಗ ಎರಡೂ ಚಿತ್ರತಂಡದವರು ಈ ಕುರಿತು ನಿರ್ಧಾರ ತೆಗೆದುಕೊಂಡಿದ್ದು, ಶೇ. 100ರಷ್ಟು ಹಾಜರಾತಿಗೆ ಅನುಮತಿ ನೀಡಿದ ನಂತರವಷ್ಟೇ ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದಕ್ಕೆ ನಿರ್ಮಾಪಕರು ತೀರ್ಮಾನಿಸಿದ್ದಾರಂತೆ.