ಔರಂಗಜೇಬ್ ಚಿತ್ರದಲ್ಲಿ ನಟಿಸಿರುವ ಬಾಲಿವುಡ್ ನಟಿ ಹಾಗೂ ಗಾಯಕಿ ಜರಾ ಖಾನ್ಗೆ ಇನ್ಸ್ಟಾಗ್ರಾಮ್ ಮೂಲಕ ಅತ್ಯಾಚಾರದ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಅಕ್ಟೋಬರ್ 28 ಮತ್ತು ನವೆಂಬರ್ 3 ರ ನಡುವೆ ಅಪರಿಚಿತ ವ್ಯಕ್ತಿಯಿಂದ ಈ ಬೆದರಿಕೆ ಬಂದಿದೆ ಎನ್ನಲಾಗ್ತಿದ್ದು, ಈ ಸಂಬಂಧ ಅವರು ಓಶಿವಾರಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು, ಸ್ಥಳೀಯ ಐಪಿ ಅಡ್ರೆಸ್ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ಹೈದರಾಬಾದ್‌ನ 23 ವರ್ಷದ ಎಂಬಿಎ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಆರೋಪಿ ಎಂದು ಗುರುತಿಸಿರುವ ನೂರಾ ಸರವರ್ ಇನ್ಸ್ಟಾಗ್ರಾಮ್ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಜರಾಗೆ ಅತ್ಯಾಚಾರದ ಬೆದರಿಕೆ ಹಾಕಿದ್ದಾಳೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗ್ತಿದೆ. ನಂತ್ರ ಮತ್ತೊಂದು ಮಾಹಿತಿ ನೀಡಿರುವ ಪೊಲೀಸರು, ನೂರಾ ಮಾನಸಿಕವಾಗಿ ಅಸ್ವಸ್ಥೆ ಎಂದು ಹೇಳಿದ್ದಾರೆ. ಆದ್ರೆ ಅತ್ಯಾಚಾರ ಬೆದರಿಕೆಗಳ ಹಿಂದಿನ ಆಕೆಯ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
ಪ್ರಕರಣದಲ್ಲಿ ಭಾಗಿಯಾಗಿರುವ ನೂರಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.