ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಮತ್ತೆ ಸುದ್ದಿಯಲ್ಲಿದ್ದಾರೆ. ನಟ ಅಕ್ಕಿನೇನಿ ನಾಗಾರ್ಜುನ ಅವರ ಪುತ್ರ ನಾಗ ಚೈತನ್ಯ ಜತೆ ವಿವಾಹ ವಿಚ್ಛೇದನ ಪಡೆದ ಬಳಿಕ ತಾವು ನಟಿಸುವ ಸಿನಿಮಾಗಳಿಗೆ ಭಾರಿ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಮಾತು ಹರಿದಾಡುತ್ತಿದೆ.
ಸಮಂತಾ ನಟಿಸಿರುವ ಶಾಕುಂತಲ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಇನ್ನಷ್ಟು ಸಿನಿಮಾಗಳು ಅವರ ಬತ್ತಳಿಕೆಯಲ್ಲಿವೆ. ಈ ಮಧ್ಯೆ ಅವರ ಸಂಭಾವನೆಯೂ ಕೂಡ ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಸಮಂತಾ ಸಿನಿಮಾವೊಂದಕ್ಕೆ ಬರೋಬ್ಬರಿ 3 ಕೋಟಿ ರೂಪಾಯಿ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾತು ದಟ್ಟವಾಗಿ ಕೇಳಿಬರುತ್ತಿದೆ.