ಹೈದರಾಬಾದ್: ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್ ಜೋಡಿ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಪಡೆದುಕೊಂಡಿದ್ದು, ಬೇರೆ ಬೇರೆಯಾಗಿ ಜೀವನ ನಡೆಸಲು ಇಬ್ಬರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕಳೆದ ವಾರ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದ ಜೋಡಿ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇದಾದ ಬಳಿಕ ನಟಿ ಸಮಂತಾ ಇದೇ ಮೊದಲ ಸಲ ಫೋಟೋವೊಂದನ್ನ ಪೋಸ್ಟ್ ಮಾಡಿದ್ದಾರೆ.
ಚಿತ್ರೀಕರಣವೊಂದರಲ್ಲಿ ಭಾಗಿಯಾಗಿರುವ ನಟಿ ಸಮಂತಾ, ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದನ್ನ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಕೆಲವೊಂದು ಸಾಲು ಬರೆದುಕೊಂಡಿದ್ದಾರೆ.