ಹೈದರಾಬಾದ್:ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್ ಜೋಡಿ ಸಮಂತಾ ಹಾಗೂ ನಾಗಚೈತನ್ಯ ಇದೀಗ ಡಿವೋರ್ಸ್ ಪಡೆದುಕೊಂಡಿದ್ದು, ಬೇರೆ ಬೇರೆಯಾಗಿ ಜೀವನ ನಡೆಸಲು ಇಬ್ಬರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದು, ಇದಾದ ಬಳಿಕ ಇದೇ ಮೊದಲ ಸಲ ಸಮಂತಾ ಇನ್ಸ್ಟಾಗ್ರಾಂನಲ್ಲಿ ಹೊಸದೊಂದು ಪೋಸ್ಟ್ ಹಾಕಿಕೊಂಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು..’ ಎಂದು ಬರೆದುಕೊಂಡಿದ್ದಾರೆ. ಡಿವೋರ್ಸ್ ಪಡೆದುಕೊಳ್ಳುತ್ತಿರುವುದು ಕನ್ಫರ್ಮ್ ಆಗ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಕೌಂಟ್ ಹೆಸರು ಬದಲಾವಣೆ ಮಾಡಿಕೊಂಡಿರುವ ಸಮಂತಾ ಹೊಸ ಪೋಸ್ಟ್ ಹಾಕಿಕೊಂಡಿದ್ದಾರೆ.