ಬೆಂಗಳೂರು:ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಇಂದು!
ಸ್ಯಾಂಡಲ್ವುಡ್ನಲ್ಲಿ ಮಾದಕ ವಸ್ತು ಮಾರಾಟ ಜಾಲ ನಂಟು ಪ್ರಕರಣದಲ್ಲಿ ಸಿಬಿಬಿ ಬಲೆಗೆ ಬಿದ್ದಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಸಂಜನಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಇವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಇಬ್ಬರೂ ನಟಿಯರ ಜಾಮೀನು ಅರ್ಜಿ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ತಿಳಿದು ಬಂದಿದೆ.
ಸಂಜನಾ ಗಲ್ರಾನಿ ಅವರನ್ನ ಈಗಾಗಲೇ 14 ದಿನಗಳ ಕಾಲ (ಸೆಪ್ಟೆಂಬರ್ 30) ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇದರ ಮಧ್ಯೆ ಅವರ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದಕ್ಕೆ ಸಿಸಿಬಿ ಕೂಡ ಆಕ್ಷೇಪನಾ ಅರ್ಜಿ ಸಲ್ಲಿಕೆ ಮಾಡಿದ್ದು, ಇಬ್ಬರು ನಟಿಯರು ಇನ್ನಷ್ಟು ದಿನ ಜೈಲಿನಲ್ಲಿ ಉಳಿದುಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.