ಕರ್ನಾಟಕ

karnataka

ETV Bharat / sitara

ಕೊರೊನಾ ಲಸಿಕೆ ಪಡೆದ ಸ್ಯಾಂಡಲ್​ವುಡ್ ಮೇಷ್ಟ್ರು ನಾಗತಿಹಳ್ಳಿ ಚಂದ್ರಶೇಖರ್ - corona vaccine

ಜಯನಗರದ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೊರೊನಾ ಲಸಿಕೆ ಪಡೆದರು.

ವ್ಯಾಕ್ಸಿನ್ ಕುರಿತು ಅರಿವು ಮೂಡಿಸಿದ ನಾಗತಿಹಳ್ಳಿ ಚಂದ್ರಶೇಖರ್
ವ್ಯಾಕ್ಸಿನ್ ಕುರಿತು ಅರಿವು ಮೂಡಿಸಿದ ನಾಗತಿಹಳ್ಳಿ ಚಂದ್ರಶೇಖರ್

By

Published : Mar 12, 2021, 2:21 PM IST

ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮುಂದುವರೆದಿದ್ದು, 45 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಇದೀಗ ಸ್ಯಾಂಡಲ್​ವುಡ್ ಮೇಷ್ಟ್ರು ಹಾಗೂ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಲಸಿಕೆ ಪಡೆದುಕೊಂಡಿದ್ದು, ಎಲ್ಲರೂ ವ್ಯಾಕ್ಸಿನ್​ ಪಡೆಯಿರಿ ಎಂದು ಜಾಗೃತಿ ಮೂಡಿಸಿದ್ದಾರೆ.

ವ್ಯಾಕ್ಸಿನ್ ಕುರಿತು ಅರಿವು ಮೂಡಿಸಿದ ನಾಗತಿಹಳ್ಳಿ ಚಂದ್ರಶೇಖರ್

ಜಯನಗರ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದ ನಾಗತಿಹಳ್ಳಿ ಚಂದ್ರಶೇಖರ್, ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಪ್ರತಿಯೊಬ್ಬ ಹಿರಿಯ ನಾಗರಿಕರು ಯಾವುದೇ ಭಯವಿಲ್ಲದೆ ಪಡೆಯಿರಿ ಎಂದು ಜನರಲ್ಲಿ ಜಾಗೃತಿ ಮೂಡಿಸುವ ಮಾತುಗಳನ್ನಾಡಿದ್ದಾರೆ.

ಈಗಾಗಲೇ ಅನೇಕ ಮಂದಿ ಕಲಾವಿದರು ಕೊರೊನಾ ಕುರಿತು ಜಾಗೃತಿ ಮೂಡಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಸಹ ಸಾಕಷ್ಟು ತಾರೆಯರು ಕೊರೊನಾ ಲಸಿಕೆ ಕುರಿತು ಅರಿವು ಮೂಡಿಸಿದ್ದಾರೆ.

ABOUT THE AUTHOR

...view details