ಕರ್ನಾಟಕ

karnataka

ETV Bharat / sitara

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ - ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಸ್ಯಾಂಡಲ್​ವುಡ್‌ನ ಹಿರಿಯ ನಟ, ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Sandalwood senior actor shivaram admitted to hospital
ಸ್ಯಾಂಡಲ್​ವುಡ್ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

By

Published : Dec 2, 2021, 1:04 PM IST

Updated : Dec 2, 2021, 10:37 PM IST

ಬೆಂಗಳೂರು: ಸ್ಯಾಂಡಲ್​ವುಡ್ ಹಿರಿಯ ನಟ ಮತ್ತು ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

'ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ವಿದ್ಯಾಪೀಠ ಸರ್ಕಲ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೇವೆ. ಸ್ಕ್ಯಾನಿಂಗ್ ರಿಪೋರ್ಟ್​​​ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಹೇಳುವ ಸರ್ಜರಿ ಮಾಡಬೇಕು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆಯಲ್ಲಿ ಸರ್ಜರಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ' ಎಂದು ಪುತ್ರ ಲಕ್ಷ್ಮೀಶ ಹೇಳಿದರು.

ನಟ ಶಿವರಾಂ

ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲೇ ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದರು. ಇನ್ನು ಶಿವರಾಮ್​ ಅವರಿಗೆ 83 ವರ್ಷ ವಯಸ್ಸಾಗಿದ್ದು, ಶುಭಮಂಗಳ, ನಾಗರಹಾವು ಮುಂತಾದ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ್ದರು.

ಇದನ್ನೂ ಓದಿ:ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಅಲ್ಲು ಸೀರಿಶ್

Last Updated : Dec 2, 2021, 10:37 PM IST

ABOUT THE AUTHOR

...view details