ಕೊರೊನಾದಿಂದಾಗಿ ದೇಶಾದ್ಯಂತ ಕಳೆದ ಏಳು ತಿಂಗಳಿಂದ ಮುಚ್ಚಿರುವ ಚಿತ್ರಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಕ್ಟೋಬರ್ 15ರಿಂದ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಿರೋದು ಸಿನಿಮಾ ಕ್ಷೇತ್ರದಲ್ಲಿ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಸತತ ಏಳು ತಿಂಗಳು ಸಿನಿಮಾ ಶೂಟಿಂಗ್ ಹಾಗೂ ಸಿನಿಮಾ ಪ್ರದರ್ಶನ ಇಲ್ಲದೆ ನಟರು, ನಟಿಯರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಿನಿಮಾ ಕಾರ್ಮಿಕರ ಕೆಲಸ ಇಲ್ಲದೆ ಮನೆಯಲ್ಲೇ ಕುಳಿತುಕೊಳ್ಳುವ ಹಾಗೇ ಆಗಿತ್ತು. ಇದೀಗ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ಗಳು ಓಪನ್ ಆಗೋದಿಕ್ಕೆ ಸಜ್ಜಾಗುತ್ತಿವೆ.