ಕೊಚ್ಚಿ (ಕೇರಳ): ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ವಿರುದ್ಧದ ಹೇಳಿಕೆ ನೀಡಿ ದೇಶದ್ರೋಹ ಆರೋಪ ಎದುರಿಸುತ್ತಿರುವ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಸತತ ಮೂರನೇ ದಿನ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಪೊಲೀಸರು, ಆಯಿಷಾ ಅವರ ಬ್ಯಾಂಕ್ ಖಾತೆ ಮತ್ತು ವಹಿವಾಟುಗಳನ್ನು ಪರಿಶೀಲಿಸುತ್ತಿದ್ದಾರೆ. ಆಯಿಷಾಳನ್ನು ಮೊದಲ ಬಾರಿಗೆ ಭಾನುವಾರ ವಿಚಾರಣೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ಒಬ್ಬರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.