ಕರ್ನಾಟಕ

karnataka

ETV Bharat / sitara

'ಬ್ಯಾಂಗ್'ನಲ್ಲಿ ಶಾನ್ವಿ ಶ್ರೀವಾಸ್ತವ್ 'ಗ್ಯಾಂಗ್ ಸ್ಟಾರ್'..! - ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಸಿನಿಮಾ

ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ, ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ಬ್ಯಾಂಗ್. ಯು ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ..

shanvi srivastava in bang movie
ನಟಿ ಶಾನ್ವಿ ಶ್ರೀವಾಸ್ತವ್ ಬ್ಯಾಂಗ್ ಸಿನಿಮಾ

By

Published : Jan 26, 2021, 8:39 PM IST

ಕನ್ನಡ ಹಾಗೂ ತೆಲುಗು ಇಂಡಸ್ಟ್ರಿಯಲ್ಲಿ ವಿಭಿನ್ನ ಚಿತ್ರಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ್ ಸದ್ಯ ಕಸ್ತೂರಿ ಮಹಲ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಚಂದ್ರಲೇಖಾದ ಈ ರಾಣಿ ಈಗ ಬ್ಯಾಂಗ್ ಎನ್ನುವ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಾನ್ವಿ ಶ್ರೀವಾಸ್ತವ್ ಗ್ಯಾಂಗ್ ಸ್ಟಾರ್ ಪಾತ್ರವನ್ನ ಮಾಡ್ತಿದ್ದಾರೆ. ಈ ರೀತಿಯ ಪಾತ್ರದಲ್ಲಿ ಈ ಮಾಸ್ಟರ್ ಪೀಸ್ ಬೆಡಗಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ‌.

ನಟಿ ಶಾನ್ವಿ ಶ್ರೀವಾಸ್ತವ್..

ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶನ ಹಾಗೂ ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಗಣೇಶ್ ಪರಶುರಾಮ್ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಬ್ಯಾಂಗ್ ಕೇವಲ ಏಳು-ಎಂಟು ಪಾತ್ರಗಳ ನಡುವೆ ಎರಡು ದಿನಗಳಲ್ಲಿ ನಡೆಯುವ ಕಥೆಯಂತೆ.

ಶಾನ್ವಿ ಲೀಡ್ ರೋಲ್​​ನಲ್ಲಿ ಅಭಿನಯಿಸುತ್ತಿದ್ದು, ಉಳಿದ ಪಾತ್ರಗಳಲ್ಲಿ ಯಾವ ಕಲಾವಿದರು ಅಭಿನಯಿಸಲಿದ್ದಾರೆ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ.

ನಾಲ್ಕು ಹಾಡುಗಳಿರುವ ಈ‌ ಚಿತ್ರಕ್ಕೆ ರಿತ್ವಿಕ್ ಮುರಳಿಧರ್ ಸಂಗೀತ ನೀಡುತ್ತಿದ್ದಾರೆ. ಉದಯಲೀಲ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದ್ದು, ಸೌಂಡ್ ಡಿಸೈನ್ ನವೀನ್ ಕುಮಾರ್ ಅವರದ್ದಾಗಿರಲಿದೆ.

ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ, ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ಬ್ಯಾಂಗ್. ಯು ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ಎರಡು ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಫೆಬ್ರವರಿಯಲ್ಲಿ 3ನೇ ಹಂತದ ಚಿತ್ರೀಕರಣ ಮಂಗಳೂರಿನಲ್ಲಿ ನಡೆಯಲಿದೆ.

For All Latest Updates

ABOUT THE AUTHOR

...view details