ಕರ್ನಾಟಕ

karnataka

ETV Bharat / sitara

ಪುನೀತ್ ರಾಜ್ ಕುಮಾರ್​ಗೆ ವಿಲನ್ ಆದ ತಮಿಳು ನಟ ಶರತ್ ಕುಮಾರ್ - James

ಪುನೀತ್ ರಾಜ್ ಕುಮಾರ್ ನಟನೆಯ 'ಜೇಮ್ಸ್' ಸಿನಿಮಾದಲ್ಲಿ ತಮಿಳು ನಟ ಶರತ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಂಡಿದ್ದು, ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ.

ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್

By

Published : Aug 6, 2021, 9:37 AM IST

ಹಿರಿಯ ತಮಿಳು ನಟ ಶರತ್ ಕುಮಾರ್ ಕನ್ನಡ ಸಿನಿಮಾದಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ 'ಜೇಮ್ಸ್' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಸಿನಿ ಪ್ರಿಯರಿಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ.

ದರ್ಶನ್ ಅಭಿನಯದ 'ಸಾರಥಿ' ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ಶರತ್ ಕುಮಾರ್, ನಂತರ ಕನ್ನಡದ ಹಲವು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 'ಯುವರತ್ನ' ಸಿನಿಮಾದಲ್ಲಿ ಪುನೀತ್​ಗೆ ತಂದೆಯಾಗಿ ಕಾಣಿಸಿಕೊಂಡಿದ್ದ ಶರತ್, ಇದೀಗ 'ಜೇಮ್ಸ್' ಚಿತ್ರದಲ್ಲಿ ಖಳನಾಯಕನಾಗಿ ಮಿಂಚಲಿದ್ದಾರೆ.

ವಿಶೇಷ ಅಂದ್ರೆ, ಇಲ್ಲಿಯವರೆಗೂ ಕನ್ನಡದಲ್ಲಿ ಪೋಷಕ ಪಾತ್ರಗಳಲ್ಲೇ ನಟಿಸುತ್ತಿದ್ದ ಶರತ್ ಕುಮಾರ್ ಅವರು ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈಗಾಗಲೇ 'ಜೇಮ್ಸ್' ಸಿನಿಮಾದ ಚಿತ್ರೀಕರಣ ಮುಕ್ತಾಯ ಹಂತಕ್ಕೆ ಬಂದಿದ್ದು, ಕೊನೆಯ ಹಂತದ ಶೂಟಿಂಗ್​ ನಡೆಯುತ್ತಿದೆ.

'ಜೇಮ್ಸ್' ಚಿತ್ರದಲ್ಲಿ ಪುನೀತ್​ಗೆ ನಾಯಕಿಯಗಿ ಪ್ರಿಯಾ ಆನಂದ್ ನಟಿಸುತ್ತಿದ್ದಾರೆ. ಬಹದ್ದೂರ್ ಚೇತನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಕಿಶೋರ್ ಪತ್ತಿಕೊಂಡ ನಿರ್ಮಿಸುತ್ತಿದ್ದಾರೆ. ಜೊತೆಗೆ ದಕ್ಷಿಣ ಭಾರತದ ಜನಪ್ರಿಯ ಸಾಹಸ ನಿರ್ದೇಶಕರಾದ ಅನ್ಬರಿವ್ ಅವರ ಸಾಹಸ ನಿರ್ದೇಶನದಲ್ಲಿ ಚಿತ್ರದ ಪ್ರಮುಖ ಫೈಟ್​ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದ್ದು, ಈ ತಿಂಗಳ ಕೊನೆಯಲ್ಲಿ ಚಿತ್ರೀಕರಣ ಮುಕ್ತಾಯವಾಗುವ ಸಾಧ್ಯತೆ ಇದೆ.

ABOUT THE AUTHOR

...view details