ಕರ್ನಾಟಕ

karnataka

ETV Bharat / sitara

ಹೆಸರಿಡದ 124ನೇ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ನಾಯಕ : ಕಣ್ಣೆ ಅದಿರಿಂದಿ ಮಂಗ್ಲಿ ಭಾಗಿ - Mangli acting in kannada film

ಕಂಚಿನ ಕಂಠದ ಮೂಲಕ ಜನಮನಸೂರೆಗೊಂಡಿರುವ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ‌ ಅವರ ಛಾಯಾಗ್ರಹಣವಿದೆ..

Shivarajkumar 124th new film launched
Shivarajkumar 124th new film launched

By

Published : Apr 24, 2021, 9:22 PM IST

Updated : Apr 24, 2021, 9:51 PM IST

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ನಿರ್ಮಿಸುತ್ತಿರುವ ಪ್ರೊಡಕ್ಷನ್ ನಂ.1 ಚಿತ್ರದ ನಾಯಕರಾಗಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ.

ಇದು ಶಿವಣ್ಣ ಅವರ 124ನೇ ಚಿತ್ರವೂ ಹೌದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ಧುಲಿಪುಡಿ ನಿರ್ದೇಶಿಸುತ್ತಿದ್ದಾರೆ. ಜೂನ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಕಂಚಿನ ಕಂಠದ ಮೂಲಕ ಜನಮನಸೂರೆಗೊಂಡಿರುವ ಗಾಯಕಿ ಮಂಗ್ಲಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ‌ ಅವರ ಛಾಯಾಗ್ರಹಣವಿದೆ.

ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ.

Last Updated : Apr 24, 2021, 9:51 PM IST

ABOUT THE AUTHOR

...view details