ಡಾ. ರಾಜ್ಕುಮಾರ್ ಬಳಿಕ ಕನ್ನಡ ಚಿತ್ರರಂಗದಲ್ಲಿ ಹಿರಿಯಣ್ಣನಾಗಿ ರೆಬಲ್ ಸ್ಟಾರ್ ಅಂಬರೀಶ್ , ಚಿತ್ರರಂಗದ ಸಮಸ್ಯೆಗಳನ್ನು ಬಗೆ ಹರಿಸುತ್ತಿದ್ರು. ಆದರೆ ಅಂಬರೀಶ್ ಅಗಲಿಕೆಯಿಂದ ಕನ್ನಡ ಚಿತ್ರರಂಗದಲ್ಲಿ ಯಾರಿಗೆ ನಾಯಕತ್ವದ ಹೊಣೆ ನೀಡಬೇಕು ಎಂಬ ಚರ್ಚೆ ನಡೆಯುತ್ತಲೇ ಇತ್ತು. ಇದೀಗ ಈ ಚರ್ಚೆಗೆ ಫುಲ್ ಸ್ಟಾಪ್ ಸಿಕ್ಕಿದೆ.
ಡಾ. ರಾಜ್ಕುಮಾರ್ ಪುತ್ರ, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸ್ಯಾಂಡಲ್ವುಡ್ ನಾಯಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದಲ್ಲಿ, ನಾಗವಾರದಲ್ಲಿರುವ ಶಿವರಾಜ್ಕುಮಾರ್ ನಿವಾಸದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟ ಸಾಧು ಕೋಕಿಲ, ನಿರ್ಮಾಪಕರಾದ ಸಾ.ರಾ. ಗೋವಿಂದ್, ಜಯಣ್ಣ, ಸೂರಪ್ಪ ಬಾಬು, ಚಿನ್ನೇಗೌಡ, ಭೋಗೇಂದ್ರ, ರಾಮು, ಭಾ.ಮಾ.ಹರೀಶ್, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಚಿತ್ರರಂಗದ ಬಹುತೇಕ ಎಲ್ಲಾ ಗಣ್ಯರು ಹಾಜರಿದ್ದರು.