74 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಸ್ಯಾಂಡಲ್ ವುಡ್ ಲೀಡರ್, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಧ್ವಜಾರೋಹಣ ಮಾಡಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಧ್ವಜಾರೋಹಣ ಮಾಡಿದ ಶಿವರಾಜ್ಕುಮಾರ್ - Shivarajkumar independence day celebration
ದೇಶಾದ್ಯಂತ ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಧ್ವಜಾರೋಹಣ ಮಾಡುವ ಮೂಲಕ ಶಿವರಾಜ್ಕುಮಾರ್ ತಮ್ಮ ನೆರೆಹೊರೆಯವರೊಂದಿಗೆ ಈ ಬಾರಿ ಸ್ವಾತಂತ್ರ್ಯ ದಿನೋತ್ಸವ ಆಚರಿಸಿದ್ದಾರೆ.
ಶಿವರಾಜ್ಕುಮಾರ್
ಪ್ರತಿ ವರ್ಷದಂತೆ ಈ ವರ್ಷವೂ ಶಿವಣ್ಣ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಶಿವಣ್ಣ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಮನೆ ನಿರ್ಮಿಸಿ ಅಲ್ಲಿ ನೆಲೆಸಿದ ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಪ್ರತಿ ವರ್ಷ ಇಲ್ಲಿನ ನಿವಾಸಿಗಳು ಐಟಿ ಬಿಟಿ ಯವರು ಸೇರಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಇರುವ ಕಾರಣ ಬೆರಳೆಣಿಕೆಯಷ್ಟು ಮಂದಿ ಮಾತ್ರ ಒಂದು ಸ್ಥಳದಲ್ಲಿ ಸೇರಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಈ ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ.