ಸಂಕ್ರಾಂತಿ ಹಬ್ಬವನ್ನ ದೇಶದೆಲ್ಲೆಡೆ ಆಚರಣೆ ಮಾಡಲಾಗುತ್ತಿದೆ. ಈ ಕೊರೊನಾ ಮಧ್ಯೆಯೂ ಸ್ಯಾಂಡಲ್ವುಡ್ನಲ್ಲಿ ಸೆಲೆಬ್ರಿಟಿಗಳ ಮನೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಶುಭಾಶಯ ಕೋರಿದ್ದಾರೆ. ಈ ವೇಳೆ ಸಹೋದರ ಪುನೀತ್ ರಾಜ್ಕುಮಾರ ಅವರನ್ನ ಶಿವಣ್ಣ ನೆನಪು ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಸೆಂಚುರಿ ಸ್ಟಾರ್ ಸಿಹಿ ಸುದ್ದಿಯೊಂದನ್ನ ನೀಡಿದ್ದಾರೆ.
ಶಿವರಾಜ್‌ಕುಮಾರ್ ನಟನೆಯ ಬೈರಾಗಿ ಚಿತ್ರದ ಶೂಟಿಂಗ್ ಮಗಿದಿದೆ. ಸದ್ಯದಲ್ಲೇ ಈ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗಲಿದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ. ಪ್ರತಿಯೊಬ್ಬರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಬೈರಾಗಿ ಸಿನಿಮಾದ ಶೂಟಿಂಗ್ ಮುಕ್ತಾಯ ಆಯ್ತು. ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ.
ಈ ವರ್ಷದ ಮೊದಲ ಬೈರಾಗಿ ಪೋಸ್ಟರ್ ಅನ್ನು ನನ್ನ ಪೇಜ್ನಿಂದ ರಿಲೀಸ್ ಮಾಡುತ್ತಿದ್ದೇನೆ. ನೋಡಿ ಆನಂದಿಸಿ. ಇನ್ನು ಕೆಲವೇ ಗಂಟೆಗಳಲ್ಲಿ ಇನ್ನೊಂದು ಸರ್ಪ್ರೈಸ್ ಕಾದಿದೆ. ಅಪ್ಪು ಐ ಲವ್ ಯೂ ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.
ಇನ್ನು ಬೈರಾಗಿ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜೊತೆ ಡಾಲಿ ಧನಂಜಯ್ ಕೂಡ ಕಾಣಿಸಿಕೊಳ್ಳಲಿರುವುದು ವಿಶೇಷ. ಟಗರು ಸಿನಿಮಾ ನಂತರ ಇವರಿಬ್ಬರ ಕಾಂಬಿನೇಷನ್ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಶಿವಣ್ಣ, ಧನಂಜಯ್ ಅಲ್ಲದೆ ಶಿವಕುಮಾರ್, ಅಂಜಲಿ, ಪೃಥ್ವಿ ಅಂಬರ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಕಾಲಿವುಡ್ ಮೂಲದ ನಿರ್ದೇಶಕ ವಿಜಯ್ ಮಿಲ್ಟನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾವನ್ನ ನಿರ್ಮಾಣ ಮಾಡಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ. ಈ ಸಿನಿಮಾ ಟೈಟಲ್‌ನಿಂದಲೇ ಅಭಿಮಾನಿಗಳಲ್ಲಿ ಕ್ಯೂರ್ಯಾಸಿಟಿ ಹುಟ್ಟಿಸಿರೋ ಬೈರಾಗಿ ಕೊರೊನಾ ಕಡಿಮೆ ಆದ್ಮೇಲೆ ಬಿಡುಗಡೆ ಆಗಲಿದೆ.