ನವದೆಹಲಿ:ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗಂಡ ರಾಜ್ ಕುಂದ್ರಾ ಬಂಧನವಾಗಿದ್ದು, ಈ ವೇಳೆ ಅವರ ವಿರುದ್ಧ ಅನೇಕ ನಟಿಯರು ವಾಗ್ದಾಳಿ ನಡೆಸಿದ್ದಾರೆ. ಇದರ ಮಧ್ಯೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮಾಜಿ ಪ್ರೇಯಸಿ ಸೋಮಿ ಅಲಿ ವಿಭಿನ್ನವಾದ ಹೇಳಿಕೆ ನೀಡಿದ್ದಾರೆ.
ನೀಲಿ ಚಿತ್ರಗಳಲ್ಲಿ ನಟನೆ ಮಾಡುವುದು ತಪ್ಪಲ್ಲ ಎಂದಿರುವ ಅವರು, ಅಶ್ಲೀಲ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಅಶ್ಲೀಲ ಚಿತ್ರಗಳಲ್ಲಿ ನಟನೆ ಮಾಡಲು ಆಯ್ಕೆ ಮಾಡಿಕೊಳ್ಳುವವರನ್ನ ನಾನು ಜಡ್ಜ್ ಮಾಡಲ್ಲ. ಈ ಕ್ಷೇತ್ರದಲ್ಲಿ ಮಹಿಳೆಯರನ್ನು ಒತ್ತಾಯಪೂರ್ವಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರೆ ಅದು ತಪ್ಪು. ಆದರೆ ಖುದ್ದಾಗಿ ಮಹಿಳೆಯರು ಈ ಕ್ಷೇತ್ರ ಆಯ್ಕೆ ಮಾಡಿಕೊಂಡರೇ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ.