ಕರ್ನಾಟಕ

karnataka

ETV Bharat / sitara

ಸಮೀರ್ ಶರ್ಮಾ ನಿಧನಕ್ಕೆ ಸಂತಾಪ ಸೂಚಿಸಿದ ನಟಿ ಸೋನಾಕ್ಷಿ ಸಿನ್ಹಾ - ನಟ ಸಮೀರ್ ಶರ್ಮಾ ಆತ್ಮಹತ್ಯೆ

ಸಮೀರ್ ಶರ್ಮಾ ಅವರು ತಮ್ಮ ಅಪಾರ್ಟ್‌ಮೆಂಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರ ನಿಧನಕ್ಕೆ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಸಂತಾಪ ಸೂಚಿಸಿದ್ದಾರೆ.

Sonakshi
Sonakshi

By

Published : Aug 7, 2020, 9:49 AM IST

ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಟೆಲಿವಿಷನ್‌ ನಟ ಮತ್ತು ಮಾಡೆಲ್ ಆಗಿದ್ದ ಸಮೀರ್ ಶರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಟ ಸಮೀರ್ ಶರ್ಮಾ ಅವರು ಬುಧವಾರ ತಡರಾತ್ರಿ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಲಾಡ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ ಸಿನ್ಹಾ ತಮ್ಮ ಇನ್​​ಸ್ಟಾಗ್ರಾಂನಲ್ಲಿ ದುಃಖ ತೋಡಿಕೊಂಡಿದ್ದಾರೆ.

ಈ ಕುರಿತು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಲಾಗಿದ್ದು, ನಟನ ಶವವನ್ನು ಶವಪರೀಕ್ಷೆಗೆ ರವಾನೆ ಮಾಡಲಾಗಿದೆ. ಅವರ ದೇಹದ ಪರಿಸ್ಥಿತಿಯನ್ನ ನೋಡಿದಾಗ ನಟ ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಸಮೀರ್ ಶರ್ಮಾ ಅವರ ಸಾವಿಗೆ ಶ್ರದ್ಧಾ ಕಪೂರ್, ನುಶ್ರತ್ ಭರೂಚ್ಚಾ, ಇಶಾ ಗುಪ್ತಾ ಮತ್ತು ಮುಕ್ತಾ ವೀರಾ ಗಾಡ್ಸೆ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ತಮ್ಮ ಟ್ವಿಟರ್ ಖಾತೆಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಸಮೀರ್ ಶರ್ಮಾ, ಕಹಾನಿ ಘರ್ ಘರ್ ಕಿ, ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ, ಜ್ಯೋತಿ, ಇಸ್ ಪ್ಯಾರ್ ಕೋ ಕ್ಯಾ ನಾಮ್ ಡು ಮತ್ತು ಲೆಫ್ಟ್‌ ರೈಟ್ ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ABOUT THE AUTHOR

...view details